News Karnataka Kannada
Monday, April 29 2024
ಚಾಮರಾಜನಗರ

ಚಾಮರಾಜನಗರದಲ್ಲಿ ಕೋಟ್ಪಾ ದಾಳಿ: ದಂಡ ವಸೂಲಿ

ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಕಣ್ಗಾವಲು ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು  ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆಯನ್ನು ಜಿಲ್ಲೆಯಲ್ಲಿ  ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ನಗರದ ಬಿ. ರಾಚಯ್ಯ ಜೋಡಿ ರಸ್ತೆ ವ್ಯಾಪ್ತಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರ ನೇತೃತ್ವದಲ್ಲಿ ಕೋಟ್ಪಾ ದಾಳಿ ನಡೆಸಿ ಒಟ್ಟು 14 ಪ್ರಕರಣಗಳಲ್ಲಿ 1700 ರೂ. ದಂಡ ವಿಧಿಸಲಾಗಿದೆ.
Photo Credit : By Author

ಚಾಮರಾಜನಗರ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಕಣ್ಗಾವಲು ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು  ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆಯನ್ನು ಜಿಲ್ಲೆಯಲ್ಲಿ  ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ನಗರದ ಬಿ. ರಾಚಯ್ಯ ಜೋಡಿ ರಸ್ತೆ ವ್ಯಾಪ್ತಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರ ನೇತೃತ್ವದಲ್ಲಿ ಕೋಟ್ಪಾ ದಾಳಿ ನಡೆಸಿ ಒಟ್ಟು 14 ಪ್ರಕರಣಗಳಲ್ಲಿ 1700 ರೂ. ದಂಡ ವಿಧಿಸಲಾಗಿದೆ.

ನಿಯಮ ಉಲ್ಲಂಘನೆ ಮಾಡಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳು, ಕೋಟ್ಪಾ ಸೆಕ್ಷನ್-4  ಎಚ್ಚರಿಕೆ ನಾಮಫಲಕವನ್ನು ಪ್ರದರ್ಶಿಸದ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್‌ಗಳು, ಟೀ ಸ್ಟಾಲ್, ಚಿಲ್ಲರೆ ಅಂಗಡಿಗಳು ಹಾಗೂ ಇತರೆ ಅಂಗಡಿಗಳು, ಕೋಟ್ಪಾ ಸೆಕ್ಷನ್-6(ಎ) ನಾಮಫಲಕವನ್ನು ಪ್ರದರ್ಶಿಸದ ತಂಬಾಕು ಮಾರಾಟವಿರುವ ಅಂಗಡಿಗಳು, ಶಿಕ್ಷಣ ಸಂಸ್ಥೆಯ 100 ಗಜಗಳ ಅಂತರದ ಒಳಗೆ ತಂಬಾಕು ಪದಾರ್ಥಗಳ ಮಾರಾಟ ಮತ್ತು ಸೇವನೆಗೆ ಉತ್ತೇಜನ ನೀಡುವ ಅಂಗಡಿಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ಸ್ಥಳದಲ್ಲೇ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿದೆ.

ಕರಪತ್ರ ವಿತರಿಸಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳು ಮತ್ತು ತಂಬಾಕು  ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.  ಜಿಲ್ಲೆಯಲ್ಲಿರುವ ಎಲ್ಲಾ ಸಾರ್ವಜನಿಕ ಸ್ಥಳದ ಮಾಲೀಕರು, ಮುಖ್ಯಸ್ಥರು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆಯಾಗದAತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಕಾರ್ಯಕ್ರಮಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಿರಿಧರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಲುವರಾಜು, ಕಾರ್ಮಿಕ ಇಲಾಖೆಯ ಮಹೇಶ್, ಆರೋಗ್ಯ ಇಲಾಖೆಯ ನಿರೀಕ್ಷಣಾಧಿಕಾರಿ ನವೀನ್ ಕುಮಾರ್, ಮಧುಶಂಕರ್, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ  ಸಲಹೆಗಾರರಾದ ಪ್ರಶಾಂತ್, ಸಮಾಜ ಕಾರ್ಯಕರ್ತರಾದ ವೀರಣ್ಣ ಅವರು ದಾಳಿಯ ವೇಳೆ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು