ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿತಪ್ಪಿ ಬಂದ ಜಿಂಕೆಯ ರಕ್ಷಣೆ

ಗುಂಡ್ಲುಪೇಟೆ: ದಾರಿ ತಪ್ಪಿ ಪಟ್ಟಣಕ್ಕೆ ಬಂದಿದ್ದ ಜಿಂಕೆಯೊಂದನ್ನು ಅರಣ್ಯ‌‌ ಇಲಾಖೆ ಸಿಬ್ಬಂದಿ ಸ್ಥಳೀಯರ‌‌ ಸಹಾಯದಿಂದ ಹಿಡಿದು ರಕ್ಷಣೆ ಮಾಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಪಂಜನಹಳ್ಳಿ ಜಮೀನು ಮಾರ್ಗವಾಗಿ ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದು ಗಾಬರಿಯಿಂದ ಪಟ್ಟಣದ ಹೆದ್ದಾರಿ ಬದಿಯಲ್ಲಿರುವ ಕಬ್ಬಿಣದ ಅಂಗಡಿಯೊಂದರ ಒಳಗೆ‌ ನುಗ್ಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಜಿಂಕೆ ಹಿಂಬಾಲಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆಗಮಿಸಿದ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಬಲೆ ಮೂಲಕ ಜಿಂಕೆ ಸೆರೆ ಹಿಡಿದಿದ್ದಾರೆ.

ಸೆರೆಯಾದ ಜಿಂಕೆಗೆ ತರಚಿದ ಸಣ್ಣಪುಟ್ಟ ಗಾಯಗಳಾಗಿದ ಹಿನ್ನೆಲೆ ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಚಿಕಿತ್ಸೆ ನೀಡಿ, ನಂತರ ಬಂಡೀಪುರ ಅರಣ್ಯಕ್ಕೆ ಬಿಟ್ಟಿದ್ದಾರೆ.

ಈ ವೇಳೆ ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಮುದ್ದುರಾಜು, ಭರತ್, ಸ್ಥಳೀಯರಾದ ಅರುಣ್ ಕರ್ನಾಟಕ ರಕ್ಷಣಾ ವೇದಿಕೆ ತಾ. ಅಧ್ಯಕ್ಷ ಸುರೇಶ್ ನಾಯಕ್ ಸೇರಿದಂತೆ ಇತರರು ಇದ್ದರು.

Ashika S

Recent Posts

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

16 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

27 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

42 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

56 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

57 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago