News Karnataka Kannada
Monday, April 29 2024
ಚಾಮರಾಜನಗರ

ಬೃಹತ್ ಮಹದೇಶ್ವರ ಪ್ರತಿಮೆ ವೀಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ: ಸ್ಥಳಕ್ಕೆ ಭೇಟಿ ಕೊಟ್ಟ ಜಿಲ್ಲಾಧಿಕಾರಿ

Deputy Commissioner visits mahadeshwara statue in protest demanding sighting of statue
Photo Credit : News Kannada

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸ್ಥಾಪಿಸಿರುವ 108 ಅಡಿ ಎತ್ತರದ ಹುಲಿ ಮೇಲೆ ಕುಳಿತಿರುವ ಶ್ರೀ ಮಹದೇಶ್ವರ ಪ್ರತಿಮೆಯನ್ನು ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಿಕೊಡುವ ಸಲುವಾಗಿ ಜಿಲ್ಲಾಧಿಕಾರಿ ಶಿಲ್ಪನಾಗ್ ರವರು ಸ್ಥಳ ಪರಿಶೀಲನೆ ನಡೆಸಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಬೃಹತ್ ಮಹದೇಶ್ವರ ಪ್ರತಿಮೆ ವೀಕ್ಷಣೆಗೆ ಆಗ್ರಹಿಸಿ ಸಾರ್ವಜನಿಕರು ಮತ್ತು ರೈತರು ನಿರಂತರ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಖುದ್ದಾಗಿ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪನಾಗ್ ರವರು ಮಹದೇಶ್ವರ ಬೆಟ್ಟದ ದೀಪದ ಒಡ್ಡುವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸಾಲೂರು ಮಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಅಭಿವೃದ್ದಿ ಪ್ರಾಧಿಕಾರ ಕಾರ್ಯದರ್ಶಿ ಗೀತಾ ಹುಡೇದ ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು