News Karnataka Kannada
Tuesday, April 30 2024
ಚಾಮರಾಜನಗರ

ರೈಲು ತಡೆದು ಪ್ರತಿಭಟನೆಗೆ ಯತ್ನ: ರೈತರ ಬಂಧನ

ಪಂಜಾಬ್, ಹರಿಯಾಣ ರಾಜ್ಯ ಗಳಲ್ಲಿ ರೈತರ ಮೇಲೆ ಕೇಂದ್ರ ಸರ್ಕಾರ ಪೊಲೀಸ್‌ ದೌರ್ಜನ್ಯ ನಡೆಸುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾ ರರ ಸಂಘದ ಕಾರ್ಯಕರ್ತರು ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
Photo Credit : News Kannada

ಚಾಮರಾಜನಗರ: ಪಂಜಾಬ್, ಹರಿಯಾಣ ರಾಜ್ಯ ಗಳಲ್ಲಿ ರೈತರ ಮೇಲೆ ಕೇಂದ್ರ ಸರ್ಕಾರ ಪೊಲೀಸ್‌ ದೌರ್ಜನ್ಯ  ನಡೆಸುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾ ರರ ಸಂಘದ ಕಾರ್ಯಕರ್ತರು ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ್ದ ಪ್ರತಿಭಟನಾ ಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈಲು ತಡೆದು ಪ್ರತಿಭಟನೆ ನಡೆಸಲು ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಬಳಿಕ ಪೊಲೀಸರು ಪ್ರತಿಭಟನಾನಿರತ ರೈತರನ್ನು ಬಂಧಿಸಿ ಕರೆದೊಯ್ದರು.

ಕೇಂದ್ರ ಸರ್ಕಾರಕ್ಕೆ ಬಂಡವಾಳಶಾಹಿಗಳ ಸಾಲ ಮನ್ನಾ ಮಾಡಲು ಹೆಚ್ಚಿನ ಕಾಳಜಿ ಇರುತ್ತದೆ. ಆದರೆ, ರೈತರ ಸಾಲ  ಮನ್ನಾ ವಿಚಾರ, ಸ್ವಾಮಿನಾಥನ್ ವರದಿ, ಬೆಂಬಲ ಬೆಲೆ, ರೈತರಿಗೆ ಪಿಂಚಣಿ ನೀಡುವ ಯೋಜನೆ, ಬೆಳೆ ವಿಮೆ ಪದ್ಧತಿ, ಪ್ರಾಣ ತ್ಯಾಗ ಮಾಡಿದ 750 ರೈತ ಕುಟುಂಬಕ್ಕೆ ಸರ್ಕಾರದ ನೆರವು ಸೇರಿದಂತೆ ಇತರೆ ಕ್ರಮಗಳ ಕುರಿತು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದರು.

ರೈತರು ನ್ಯಾಯ ಕೇಳಿದರೆ ಗೋಲಿಬಾರ್ ಮಾಡುತ್ತಾರೆ. ಇದು ದೇಶದ ರೈತನಿಗೆ ಮಾಡುವ ಅಪಮಾನವಾಗಿದೆ. ಪೊಲೀಸರ ದಾಳಿಯ ಮೂಲಕ ರೈತರನ್ನು ಕೊಲ್ಲಲಾಗುತ್ತಿದೆ . ಕೂಡಲೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರೈತರು ದೇಶದ ಬೀದಿ ಬೀದಿಗಳಲ್ಲಿ ಧರಣಿ ನಡೆಸುತ್ತಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು