ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಕಾಡು ನಾಶವಾಗಿತ್ತು ಈ ಕುಕೃತ್ಯಕ್ಕೆ ಕಾರಣನಾದ ಆರೋಪಿಯನ್ನ ಬಂದಿಸಿದ ಅರಣ್ಯ ಇಲಾಖೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಬಂಡೀಪುರ ರಕ್ಷಿತಾರಣ್ಯದ ಮದ್ದೂರು ವಲಯ ವ್ಯಾಪ್ತಿಯ ಕರಡಿ ಕಲ್ಲು ಅರಣ್ಯ ಪ್ರದೇಶದಲ್ಲಿ ತೇಗದ ಮರ ಕಟಾವು ಮಾಡಲು ತೆರಳಿದ್ದ ಕಳ್ಳೀಪುರ ಗ್ರಾಮದ ಅರುಣ್ ಎಂಬಾತ ಅರಣ್ಯ ಇಲಾಖೆಯ ಗಮನವನ್ನ ಬೇರೆಡೆ ಸೆಳೆಯಲು ಬೆಂಕಿ ಹಚ್ಚಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಏಪ್ರಿಲ್ 29 ರ ಬೆಂಕಿ ಅವಘಡ ಪ್ರಕರಣದ ಸಂಬಂದ ಸಿಎಫ್ ಪ್ರಭಾಕರನ್ ಮಾರ್ಗದರ್ಶನದಲ್ಲಿ ಗುಂಡ್ಲುಪೇಟೆ ಎಸಿಎಫ್ ರವೀಂದ್ರ ನೇತೃತ್ವದಲ್ಲಿ ಆರೋಪಿಗಳ ಪತ್ತೆಗಾಗಿ ತಂಡವನ್ನ ರಚನೆ ಮಾಡಲಾಗಿತ್ತು,

ಅದರಂತೆ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿರುವ ಅಧಿಕಾರಿಗಳು ಬಂದಿತ ಆರೋಪಿ ಕಳ್ಳೀಪುರ ಗ್ರಾಮದ ಅರುಣ್ ಎಂಬಾತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಮತ್ತೊಬ್ಬ ಆರೋಪಿ ಹಗ್ಗದಹಳ್ಳ ಗ್ರಾಮದ ಕುಮಾರ್ ಎಂಬಾತ ತಲೆಮರೆಸಿಕೊಂಡಿದ್ದು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Chaitra Kulal

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago