News Karnataka Kannada
Thursday, May 09 2024
ಚಾಮರಾಜನಗರ

ಚಾಮರಾಜನಗರದಲ್ಲಿ ಪ್ರವಾಹ ಭೀತಿ: ಎಚ್ಚರವಾಗಿರಲು ಜನರಿಗೆ ಸೂಚನೆ

Flood scare in Chamarajanagar: Warning to stay alert
Photo Credit : By Author

ಚಾಮರಾಜನಗರ: ಕಬಿನಿ ಹಾಗೂ ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 85 ಸಾವಿರದಿಂದ ಒಂದೂವರೆ ಲಕ್ಷ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡುವ ಸಂಭವವಿರುವುದರಿಂದ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಾಗಿ ಸುರಕ್ಷಿತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮನವಿ ಮಾಡಿದ್ದಾರೆ.

ಕೃಷ್ಣರಾಜಸಾಗರ ಜಲಾಶಯದಿಂದ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡುವ ಸಂಭವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕು ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಬರುವ ಮುಳ್ಳೂರು, ಹಳೆ ಹಂಪಾಪುರ, ದಾಸನಪುರ, ಹಳೆ ಅಣಗಳ್ಳಿ, ಹರಳೆ, ಸರಗೂರು, ಧನಗೆರೆ, ಎಡಕುರಿಯ, ಸತ್ತೇಗಾಲ ಮುಂತಾದ ನದಿಯ ಎರಡೂ ದಂಡೆಗಳಲ್ಲಿರುವ ಗ್ರಾಮಗಳು ಹಾಗೂ ನದಿಯ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಾಗಿ ಸುರಕ್ಷಿತ ಮುನ್ನೆಚ್ಚರಿಕೆ ವಹಿಸಬೇಕು.

ನದಿ ಪಾತ್ರದಲ್ಲಿ ವಾಸಿಸುವ ಜನರು ನದಿ ನೀರಿನಲ್ಲಿ ಬಟ್ಟೆ ಒಗೆಯುವುದು, ಸ್ನಾನ ಮಾಡುವುದು, ಹಸು ತೊಳೆಯುವುದು, ಈಜುವುದು ಇನ್ನಿತರ ಚಟುವಟಿಕೆಗಳನ್ನು ಮಾಡಬಾರದು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತೆ ವಹಿಸಲು ಗ್ರಾಮಗಳಿಗೆ ಆಗಮಿಸುವ ಅಧಿಕಾರಿ, ಸಿಬ್ಬಂದಿಯವರಿಗೆ ಸಹಕರಿಸಬೇಕು. ನದಿಯ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ನದಿಗೆ ಇಳಿಯಬಾರದು. ನದಿ ಬಳಿ ತೆರಳದೆ ಸುರಕ್ಷಿತವಾಗಿರಬೇಕು. ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ, ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುಪಬೇಕು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಿಗರು ಸಾರ್ವಜನಿಕರಿಗೆ ಸುರಕ್ಷಿತ ಕ್ರಮಗಳ ಕುರಿತು ಗ್ರಾಮಗಳಲ್ಲಿ ಟಾಂಟಾಂ ಸಾರಿಸಬೇಕು. ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ತುರ್ತು ಸೇವೆಗೆ ಶುಲ್ಕ ರಹಿತ ಸಂಖ್ಯೆ 1077 ದೂ.ಸಂ 08226-223160 ಮೊ.ಸಂ 9740942901 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು