News Karnataka Kannada
Wednesday, May 01 2024
ಚಾಮರಾಜನಗರ

ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಜಿಲ್ಲೆಯ ಹನೂರು ಗುಂಡಿಮಾಳ ಗ್ರಾಮದಿಂದ ಹೊಸಪೋಡು ಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ.
Photo Credit : NewsKarnataka

ಚಾಮರಾಜನಗರ : ಜಿಲ್ಲೆಯ ಹನೂರು ಗುಂಡಿಮಾಳ ಗ್ರಾಮದಿಂದ ಹೊಸಪೋಡು ಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಒಡೆಯರ ಪಾಳ್ಯ ಸಮೀಪದ ಹೊಸ ಪೋಡು ಗ್ರಾಮದ ಈರಾ (61) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಕಾರ್ಯನಿಮಿತ್ತ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸಿದ್ದ ಹೊಸ ಫೋಡು ಗ್ರಾಮದ ನಿವಾಸಿ ಈರ ಎಂಬಾತ ಕೆಲಸ ಮುಗಿದ ಮೇಲೆ ಗುಂಡಿಮಾಳದ ವರಗೆ ಬಸ್ ನಲ್ಲಿ ಪ್ರಯಾಣಿಸಿ ನಂತರ ಹೊಸ ಪೋಡು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.

ಬುಧವಾರ ಒಡೆಯರಪಾಳ್ಯ ಗ್ರಾಮಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದ ಈರ ಗುರುವಾರ ಬೆಳಗ್ಗೆ ಆದರೂ ಬಾರದೇ ಇರುವುದರಿಂದ ಕುಟುಂಬಸ್ಥರು ಅರಣ್ಯದಲ್ಲಿ ಹುಡುಕುತ್ತಿದ್ದ ವೇಳೆ ಶವ ಪತ್ತೆಯಾಗಿದೆ.

ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಹನೂರು ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಘಟನಾಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು