News Karnataka Kannada
Wednesday, April 24 2024
Cricket
ಚಾಮರಾಜನಗರ

ಚಿರತೆ ದಾಳಿಯಿಂದ ಬಾಲಕಿ ಸಾವು 15 ಲಕ್ಷ ರೂ. ಪರಿಹಾರ ಘೋಷಣೆ

Girl dies in leopard attack, rs 15 lakh compensation Declaration of compensation
Photo Credit : News Kannada

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕಿ ಸುಶೀಲಾ ಸಾವು ವಿಚಾರ ಕೇಳಿ ಬೇಸರ ಆಗಿದ್ದು, ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ನೀಡಲು ಸೂಚನೆ ನೀಡಿ, 4 ಸಾವಿರ ಮಾಸಾಶನ ಬರುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟು ಜಾರಿಗೊಳಿಸಲು ಪ್ರಯತ್ನ ಪಡುತೇನೆ” ಎಂದರು.

ಜೂ.26ರ ರಾತ್ರಿ ತಮ್ಮ ಮನೆ ಬಳಿ ಚಿರತೆ ದಾಳಿಗೆ ಸಿಲುಕಿದ್ದ ಬಾಲಕಿಯನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸುಶೀಲಾ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು