ಗೋಪಾಲಸ್ವಾಮಿಬೆಟ್ಟದಲ್ಲಿ ಅದ್ಧೂರಿ ಬ್ರಹ್ಮ ರಥೋತ್ಸವ

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಬ್ರಹ್ಮ ರಥೋತ್ಸವ ಸಡಗರ ಸಂಭ್ರಮದಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ವೇಳೆ ನೆರೆದಿದ್ದ ಭಕ್ತರು ಜಯಘೋಷ ಮೊಳಗಿಸಿದರು.

ರಥೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಮುಜರಾಯಿ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ದೇವಸ್ಥಾನದ  ಆಡಳಿತ ಮಂಡಳಿಯ ಸದಸ್ಯರು ದೇವಸ್ಥಾನವನ್ನು ತಳಿರು ತೋರಣ, ವಿದ್ಯುತ್ ದೀಪಗಳಿಂದ ಶೃಂಗಾರ ಮಾಡುವ ಮೂಲಕ ದೇವಸ್ಥಾನದ ಪ್ರಾಂಗಣದದಿಂದ ಗರ್ಭಗುಡಿವರೆಗೆ  ಸಂಪೂರ್ಣವಾಗಿ ಜೋಳ, ಹಣ್ಣುಗಳು ಹಾಗೂ ಹೂವಿನ ಅಲಂಕಾರ ಮಾಡಿದ್ದರು.

ಮೊದಲಿಗೆ ಗೋಪಾಲಸ್ವಾಮಿ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿಟ್ಟು ಭಕ್ತಾಧಿಗಳು ಗೋಪಾಲ, ಗೋವಿಂದ  ಎಂಬ ಜೈಕಾರದೊಂದಿಗೆ ಮಂಗಳವಾದ್ಯ ಹಾಗೂ ಕಲಾ ತಂಡಗಳೊಂದಿಗೆ ದೇವಸ್ಥಾನ ಸುತ್ತ ಉತ್ಸವ ಮೂರ್ತಿಯನ್ನು ಭಕ್ತಾಧಿಗಳು ಹೆಗಲ ಮೇಲೆ ಹೊತ್ತು ದೇವಸ್ಥಾನದ ಸುತ್ತಲೂ ಮೂರು ಸುತ್ತು ಪ್ರದಕ್ಷಿಣೆ ಹಾಕಿಸುವ ಮೂಲಕ ಮೆರವಣಿಗೆ ಮಾಡಲಾಯಿತು. ಈ ವೇಳೆ ಸ್ಥಳೀಯರು ಸೇರಿದಂತೆ ದೂರದಿಂದ ಆಗಮಿಸಿದ ಭಕ್ತರು ಗೋಪಾಲಸ್ವಾಮಿಯ ಭವ್ಯ ರಥೋತ್ಸವದಲ್ಲಿ ಪಾಲ್ಗೊಂಡು ರಥವನ್ನು ಎಳೆದು ಹಣ್ಣು ಜವನ ಎಸೆದು ಕೃತಾರ್ಥರಾದರು.

ಬ್ರಹ್ಮ ರಥೋತ್ಸವದ ಹಿನ್ನಲೆಯಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪೊಲೀಸ್ ಬಿಗಿ ಬಂದೋ ಬಸ್ತ್  ಮಾಡಲಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುವುದರ ಮೂಲಕ ರಥೋತ್ಸವ ಸುಗಮವಾಗಿ ನಡೆಯಲು ಸಹಕರಿಸಿದರು. ಕೆ.ಎಸ್.ಆರ್.ಟಿ.ಸಿ ಯು ಭಕ್ತರ ಅನುಕೂಲಕ್ಕಾಗಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸೌಲಭ್ಯ ಕಲ್ಪಿಸಿತ್ತು.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

9 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago