ಗುಂಡ್ಲುಪೇಟೆ: ಕಸದ ತೊಟ್ಟಿಯಾದ ಚಾಮರಾಜನಗರ ಬೈಪಾಸ್ ರಸ್ತೆ

ಚಾಮರಾಜನಗರ: ನಗರದ ಸಮೀಪದ ಸೋಮವಾರಪೇಟೆಯಿಂದ ಗುಂಡ್ಲುಪೇಟೆ ರಸ್ತೆಗೆ ಸಾಗುವ ಬೈಪಾಸ್ ರಸ್ತೆಯಲ್ಲಿ ಕಸ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಗಬ್ಬು ನಾರುತ್ತಿದ್ದು, ಜನ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸತ್ತ ಪ್ರಾಣಿಗಳನ್ನು ಕೂಡ ಇಲ್ಲಿಯೇ ಎಸೆದು ಹೋಗುತ್ತಿದ್ದು, ಬೈಪಾಸ್ ರಸ್ತೆಯೋ ಕಸದ ತೊಟ್ಟಿಯೋ ಎಂಬ ಸಂಶಯ ಮೂಡಿದೆ. ಈ ವ್ಯಾಪ್ತಿಯಲ್ಲಿ ವಾಸಿಸುವವರ ಪರಿಸ್ಥಿತಿ ಶೋಚನೀಯವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಇರುವುದು ವಾಹನಗಳು ಸಂಚಾರ ಮಾಡುವುದಕ್ಕೆ ಹೊರತು ಸತ್ತ ಪ್ರಾಣಿಗಳು ಮತ್ತು ಕೋಳಿ ತ್ಯಾಜ್ಯ, ಬಾಳೆಸೋಗೆ ಹಾಗೂ ಇನ್ನು ಬಳಕೆಯಾಗದ ವಸ್ತುಗಳನ್ನು ತಂದು ಸುರಿದು ಹೋಗಲು ಅಲ್ಲ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ನಗರದಿಂದ ಸುಮಾರು 4 ಕಿಲೋ ಮೀಟರ್ ದೂರದ ಕರಿವರದಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಗರ ಸಭೆ ವತಿಯಿಂದ ನಗರ ಸಾರ್ವಜನಿಕರು ಬಳಸಿದ ತ್ಯಾಜ್ಯ ವಸ್ತುಗಳು, ಮನೆ ಮನೆಗಳಲ್ಲಿ ಹಾಗೂ ಹೋಟೆಲ್‌ಗಳ ಕಸವನ್ನು ಸಂಗ್ರಹಿಸಲು ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ಆದರೂ ಬೈಪಾಸ್ ರಸ್ತೆಯಲ್ಲಿ ಕಸಗಳನ್ನು ಹಾಕಿ ಚಲುವ ಚಾಮರಾಜನಗರದ ಅಂದವನ್ನು ಹಾಳುಮಾಡುತ್ತಿದ್ದಾರೆ. ಇದರ ಬಗ್ಗೆ ಕ್ರಮ ವಹಿಸಬೇಕು ಎಂದು ಸೋಮವಾರ ಪೇಟೆಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಗರಸಭೆಯವರು ಇತ್ತ ಗಮನ ಹರಿಸಬೇಕಿದೆ. ಗ್ರಾಮಸ್ಥರ ಆರೋಗ್ಯ ಕೆಟ್ಟರೆ ಸಂಬಂಧಿಸಿದ ಅಧಿಕಾರಿಗಳು ಹೊಣೆಯಾಗಬೇಕಾಗುತ್ತದೆ.

ಜಿಲ್ಲಾಧಿಕಾರಿಗಳು ಕೂಡಲೇ ಹದಗೆಟ್ಟ ಬೈಪಾಸ್ ರಸ್ತೆಯನ್ನು ದುರಸ್ತಿ ಮಾಡಿ ಕಸ ಎಸೆಯುವುದಕ್ಕೆ ಬ್ರೇಕ್ ಹಾಕುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

Sneha Gowda

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

17 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

33 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

57 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago