News Karnataka Kannada
Wednesday, May 08 2024
ಚಾಮರಾಜನಗರ

ಹನೂರು: ನಾ ನಾಯಕಿ ಸಮಾವೇಶ ಯಶಸ್ವಿಗೊಳಿಸಲು ಮಹಿಳೆರಿಗೆ ಮನವಿ

Hanur: Appeal to women to make Naa Nayaka Sammelan a success
Photo Credit : By Author

ಹನೂರು: ನಾನಾಯಕಿ ಕಾರ್ಯಕ್ರಮ ಜ.16ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದು, ಈ ಕಾರ್ಯಕ್ರಮಕ್ಕೆ ಬೃಹತ್ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಮಾಡುವ ಕಾರ್ಯಕ್ಕೆ ಕಾಂಗ್ರೆಸ್ ಮುಂದಾಗಿದ್ದು, ಈ ಸಂಬಂಧ ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಬೇಕು ಎಂದು ಶಾಸಕ ಆರ್.ನರೇಂದ್ರ ತಿಳಿಸಿದ್ದಾರೆ.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ಧ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಕಲ್ಪಿಸಿದ್ದು, ಆಡಳಿತದ ಅವಕಾಶವನ್ನು ಒದಗಿಸಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಸಂದ ಗೌರವ. ಈ ದಿಸೆಯಲ್ಲಿ ಇಂದು ಮಹಿಳೆಯರು ಸಂಘಟಿತರಾಗುತ್ತಿರುವುದು ಮೆಚ್ಚುಗೆಯ ಸಂಗತಿ. ಇದೀಗ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಜ.16 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ನಾ ನಾಯಕಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗಾಗಿ ಹನೂರು ಕ್ಷೇತ್ರದಿಂದ ಮಹಿಳಾ ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಬಡವರಿಗೆ ಭಾಗ್ಯಲಕ್ಷ್ಮೀ ಯೋಜನೆಯ ಮೂಲಕ ಉಚಿತ ವಿದ್ಯುತ್ ಕಲ್ಪಿಸಲಾಗಿತ್ತು. ಆದರೆ ಇದೀಗ ಬಿಜೆಪಿ ಸರ್ಕಾರ ಭಾಗ್ಯಲಕ್ಷ್ಮೀ ಯೋಜನೆಯಡಿ ಸಂಪರ್ಕ ಪಡೆದಿರುವವರು ವಿದ್ಯುತ್ ಬಿಲ್ ಪಾವತಿಸಬೇಕು ಎಂದು ಸೂಚಿಸಿ ಬಡ ಜನರನ್ನು ಕಷ್ಟಕ್ಕೆ ನೂಕಿದೆ. ರಾಜ್ಯದಲ್ಲಿ ವಿದ್ಯುತ್ ಹೆಚ್ಚು ಉತ್ಪಾದನೆ ಹೆಚ್ಚಾಗುತ್ತಿದ್ದು, ಇತರೆ ರಾಜ್ಯಗಳಿಗೂ ಪೂರೈಕೆ ಮಾಡಲಾಗುತ್ತಿದೆ. ಅಂತಹದರಲ್ಲಿ ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ. ಜತೆಗೆ ಕಳೆದ 3 ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಅನುದಾನವನ್ನು ನೀಡಿಲ್ಲ. ಬದಲಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ 3.5 ಸಾವಿರ ಕೋಟಿ ರೂ ಅನುದಾನ ಲಭಿಸಿದ್ದು, ಹಲವು ಅಭಿವೃದ್ಧಿ ಕಾರ್ಯಗಳು ಇಂದಿಗೂ ನಡೆಯುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ಧ ಪ್ರದೀಪ್‍ಕುಮಾರ್ ಅವರು ಶಾಸಕ ಆರ್.ನರೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಜಿಪಂ ಮಾಜಿ ಅಧ್ಯಕ್ಷೆ ಶಿವಮ್ಮ, ಮಾಜಿ ಉಪಾಧ್ಯಕ್ಷ ಬಸವರಾಜು, ತಾಪಂ ಮಾಜಿ ಸದಸ್ಯ ಜವಾದ್ ಅಹಮದ್, ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಸೋಮಶೇಖರ್, ಸಂಪತ್‍ಕುಮಾರ್, ಚಾಮುಲ್ ನಿರ್ದೇಶಕ ಶಾಹುಲ್ ಅಹಮದ್, ಸೂಳೆರಿ ಪಾಳ್ಯ ಗ್ರಾಪಂ ಅಧ್ಯಕ್ಷ ಸುಧಾ, ಮುಖಂಡರಾದ ಮದುವನಹಳ್ಳಿ ಶಿವಕುಮಾರ್, ಸಿದ್ದರಾಜು, ಪೆದ್ದನಪಾಳ್ಯ ಮಣಿ, ಅಜ್ಜಿಪುರ ನಾಗರಾಜು, ಶಾಗ್ಯ ಮಲ್ಲೇಶ್, ಪಾಳ್ಯ ಕೃಷ್ಣ, ನಟರಾಜು ಹಾಗೂ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು