ಪಿರಿಯಾಪಟ್ಟಣದಲ್ಲಿ ಅಗತ್ಯ ಪರಿಹಾರಕ್ಕೆ ಸಹಾಯವಾಣಿ ಆರಂಭ

ಪಿರಿಯಾಪಟ್ಟಣ: ಮಳೆ ಹಾನಿ ಸಂಬಂಧ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಲು ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆ ಸಹಕಾರದೊಂದಿಗೆ ವಾರ್ ರೂಂ ತೆರೆದು ಸಹಾಯವಾಣಿ(08223 – 274007) ಆರಂಭಿಸಲಾಗಿದೆ ಎಂದು ತಹಶೀಲ್ದಾರ್ ಕುಂಞಿ ಅಹಮದ್ ತಿಳಿಸಿದರು.

ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ತಹಶೀಲ್ದಾರ್ ಅವರು ಮಾತನಾಡಿ ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆಯವರು ಮುಂಜಾಗ್ರತ ಕ್ರಮವಹಿಸಿ ಶಿಥಿಲ ಕೊಠಡಿಗಳ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ದುರಸ್ತಿಗೆ ಶೀಘ್ರ ಕ್ರಮ ವಹಿಸಬೇಕು, ಮಳೆಗಾಲ ಸಂದರ್ಭ ಹಾಳಾಗುವ ರಸ್ತೆ ಚರಂಡಿ ಸೇತುವೆಗಳ ದುರಸ್ತಿಗೆ ಸಂಬಂಧಿಸಿದ ಇಲಾಖೆಯವರು ಮುಂಜಾಗ್ರತಾ ಕ್ರಮ ವಹಿಸಿ ಮಾಹಿತಿ ನೀಡಬೇಕು ಶೀಘ್ರ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ತಾಲೂಕು ಆಡಳಿತ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಸಹಕಾರದೊಂದಿಗೆ ಟಾಸ್ಕ್ ಫೋರ್ಸ್ ಸಮಿತಿ ರಚಿಸಿ ಅಗತ್ಯ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ.

ಮಳೆ ಹಾನಿಯಿಂದಾಗುವ ಮನೆ ಕುಸಿತ ಹಾಗೂ ಬೆಳೆ ಹಾನಿಯ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಅಂದಾಜು ಪಟ್ಟಿ ನೀಡಬೇಕು, ಜಾನುವಾರು ಸಾವು ಹಾಗೂ ಕೊಟ್ಟಿಗೆ ಹಾನಿಯ ಬಗ್ಗೆ ಶೀಘ್ರ ಮಾಹಿತಿ ಪಡೆದು ಘಟನೆ ಸಂಭವಿಸಿದ 24 ಗಂಟೆಯ ಒಳಗೆ ಪರಿಹಾರಕ್ಕೆ ಮುಂದಾಗಬೇಕು, ತಾಲೂಕಿನಲ್ಲಿ ಅತಿ ಹೆಚ್ಚು ಮಳೆ ಹಾನಿಯಾಗುವ ಹಾರನಹಳ್ಳಿ ಹೋಬಳಿಯನ್ನು ನೆರೆ ಪ್ರವಾಹ ಪೀಡಿತ ಪ್ರದೇಶ ಎಂದು ಗುರುತಿಸಿ ಮೂರು ಗಂಜಿ ಕೇಂದ್ರಗಳನ್ನು ತೆರೆಯಲು ಸ್ಥಳ ಗುರುತಿಸಲಾಗಿದೆ, ತಾಲೂಕು ಆಡಳಿತ ಭವನದಲ್ಲಿ ಮಳೆ ಹಾನಿಯ ಬಗ್ಗೆ ಮಾಹಿತಿ ಸಂಗ್ರಹಿಸಲು ದಿನದ 24 ಗಂಟೆಯೂ ವಿವಿಧ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಪಾಳಿವಾರು ಕರ್ತವ್ಯ ನಿರ್ವಹಿಸಲಿದ್ದು ಸಾರ್ವಜನಿಕರು ಮಳೆ ಹಾನಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಸಹಾಯವಾಣಿ ಸಂಖ್ಯೆ 08223 – 274007 ಸಂಪರ್ಕಿಸಲು ಮನವಿ ಮಾಡಿದ್ದಾರೆ.

Sneha Gowda

Recent Posts

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

23 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

41 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago