ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರಕ್ಕೆ ಹೊಂದಿಕೊಂಡಂತಿರುವ ತಾಳವಾಡಿ ಸಮೀಪದ ಮಲ್ಲನಗುಳಿ ಸಮೀಪ ಮುಂಜಾನೆ ಆನೆಗಳ ಹಿಂಡು ಪ್ರತ್ಯಕ್ಷವಾಗಿದ್ದು ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಂತಿರುವ ತಮಿಳುನಾಡಿನ ಮಲ್ಲನಗುಳಿ ಗ್ರಾಮದ ಹೊರವಲಯದಲ್ಲಿ ಬೆಳ್ಳಂಬೆಳಗ್ಗೆ ಆನೆಗಳ ಹಿಂಡು ಪ್ರತ್ಯಕ್ಷವಾಗಿ ರೈತರು ಆತಂಕಕ್ಕೆ ಒಳಗಾಗುವಂತೆ ಮಾಡಿವೆ. ಇತ್ತೀಚೆಗಷ್ಟೇ ತಾಳವಾಡಿ ಸಮೀಪದ ಮುದಿನೂರು ಎಂಬಲ್ಲಿ ಅನೇತುಳಿತಕ್ಕೆ ರೈತರೊಬ್ಬರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದು ಈ ಘಟನೆ ಮಾಸುವ ಮುಂಚೆಯೇ ಗಜಪಡೆ ಪ್ರತ್ಯಕ್ಷವಾಗಿರುವುದು ರೈತಾಪಿ ವರ್ಗದ ಆಕ್ರೋಶಕ್ಕೆ ಕಾರಣವಾಗಿದೆ . ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿರುವ ಆನೆಗಳ ಹಾವಳಿ ತಪ್ಪಿಸುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.