News Karnataka Kannada
Monday, April 29 2024
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕೆ ಎಣಿಕೆ: 2.90 ಕೋಟಿ ರೂ. ಸಂಗ್ರಹ

Hundi donation count at Male Mahadeshwara Hill: Rs 2.90 crore Collection
Photo Credit : News Kannada

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, 2.90 ಕೋಟಿ ರೂ. ಸಂಗ್ರಹವಾಗಿದೆ.

ಅದರಲ್ಲೂ ಹೊಸ ವರ್ಷದ ಸಂಭ್ರಮ ಹಿನ್ನೆಲೆ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದಿದ್ದಾರೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ತಡರಾತ್ರಿವರೆಗೂ ಹುಂಡಿ ಎಣಿಕೆ ನಡೆದು ಕಳೆದ ಒಂದು ತಿಂಗಳ ಅವಧಿಯಲ್ಲಿ ಭಕ್ತರು ಮಹದೇಶ್ವರನಿಗೆ ನಗದು ರೂಪದಲ್ಲಿ ಒಟ್ಟು 2,90,00,732 ರೂಪಾಯಿ ಕಾಣಿಕೆ ಸಮರ್ಪಿಸಿದ್ದಾರೆ.

ಈ ಪೈಕಿ 13 ಲಕ್ಷ ರೂ.ಗೂ ಹೆಚ್ಚು ಹಣ ನಾಣ್ಯಗಳ ರೂಪದಲ್ಲೇ ಕಾಣಿಕೆ ಸಲ್ಲಿಸಿರುವುದು ವಿಶೇಷವಾಗಿದೆ. ನಗದು ಜೊತೆಗೆ 102 ಗ್ರಾಂ ಚಿನ್ನ, 3 ಕೆಜಿ 155 ಗ್ರಾಂ ಬೆಳ್ಳಿಯನ್ನು ಭಕ್ತರ ಮಾದಪ್ಪನಿಗೆ ಅರ್ಪಿಸಿದ್ದಾರೆ. ಇದಲ್ಲದೇ 23 ಅಮೆರಿಕನ್ ಡಾಲರ್‌, ಕೆನಡಾದ 100 ಡಾಲರ್, ಓಮನ್ ದೇಶದ 4 ರಿಯಾಲ್ ನೋಟುಗಳು ಸಹ ಕಾಣಿಕೆ ಹುಂಡಿಯಲ್ಲಿ ಪತ್ತೆಯಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು