ವಿದ್ಯುತ್ ಸಂಪರ್ಕಕ್ಕಾಗಿ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಚಾಮರಾಜನಗರ: ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಇನ್ನೂ ಕತ್ತಲೆಯಲ್ಲಿಯೇ ಜೀವನ ಸಾಗಿಸುತ್ತಿರುವ ಜಿಲ್ಲೆಯ ಮಲೆಮಹದೇಶ್ವರಬೆಟ್ಟದ ಪಾಲಾರ್‌ನ ಆದಿವಾಸಿ ಬಡಾವಣೆಯ ನಿವಾಸಿಗಳು ನಮಗೆ  ವಿದ್ಯುತ್ ಸಂಪರ್ಕ ಕಲ್ಪಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅರಣ್ಯವಾಸಿ ಸೇವಾ ಟ್ರಸ್ಟ್‌ನ ಕಾರ್ಯಾಧ್ಯಕ್ಷ ನಾಗೇಂದ್ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಮೀಪದ ಪಾಲಾರ್‌ನಲ್ಲಿ 80 ಆದಿವಾಸಿ ಕುಟುಂಬಗಳು ವಾಸ ಮಾಡುತ್ತಿವೆ. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಇಲ್ಲಿಯ ತನಕ ವಿದ್ಯುತ್‌ ಸಂಪರ್ಕ ಇಲ್ಲ. 50 ಮೀ. ದೂರದಿಂದ ಮನೆಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಅರಣ್ಯ ಇಲಾಖೆ ಬಿಡುತ್ತಿಲ್ಲ ಎಂದು ಅಳಲು ತೋಡಿ ಕೊಂಡರು.

ಪಾಲಾರ್‌ನಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರವಿದೆ.  50ಕ್ಕೂ ಹೆಚ್ಚು ಮಕ್ಕಳು ಶಾಲೆಗೆ ಹೋಗುತ್ತಾರೆ. ಮನೆಗಳಲ್ಲಿ ಕರೆಂಟ್ ವ್ಯವಸ್ಥೆ ಇಲ್ಲದ ಕಾರಣ ಮಕ್ಕಳಿಗೆ ಓದಿಕೊಳ್ಳಲು ತೊಂದರೆಯಾಗುತ್ತಿದೆ. ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಆಗ್ರಹಿಸಿ ಮಾ.15 ರಂದು ಸೆಸ್ಕ್ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಮಾಡಿದ ಪರಿಣಾಮ ಸೆಸ್ಕ್ ಇಲಾಖೆಯ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗಿದ್ದಾರೆ ಎಂದರು.

ವಿದ್ಯುತ್ ಸಂಪರ್ಕ ಕಲ್ಪಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಡುತ್ತಿಲ್ಲ. ಇದರಿಂದ ಸಂಜೆಯಾಗುತ್ತಿದ್ದಂತೆ ಮನೆಯಿಂದ ಹೊರಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಭಯದಿಂದ ಜೀವನ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ ಉಚಿತ ವಿದ್ಯುತ್ ನೀಡುತ್ತಿದೆ. ಆದರೆ, ನಮಗೆ ಕರೆಂಟ್ ವ್ಯವಸ್ಥೆ ಇಲ್ಲ ಎಂದು ಹೇಳಿದರು.

 ಗೋಪಿನಾಥಂನಲ್ಲಿರುವ ಖಾಸಗಿ ರೆಸಾರ್ಟ್‌ಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡಲಾಗಿದೆ. ಆದರೆ, ನಮಗೆ ಅನುಮತಿ ನೀಡುತ್ತಿಲ್ಲ. ಇದರಿಂದಾಗಿ ನಾವು ಪ್ರಾಣಿಗಳಿಗಿಂತ ಕಡೆಯಾಗಿದ್ದೇವೆ. ಹಾಡಿಗಳಿಗೆ ಮೂಲ ಸೌಕರ್ಯ ಒದಗಿಸದಿದ್ದ  ಮೇಲೆ ಚುನಾವಣೆಯ ಅವಶ್ಯಕತೆ ಇಲ್ಲ. ಏ.1 ರಂದು ಕೊಳ್ಳೇಗಾಲದ ಡಿಎಫ್‌ಒ ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿರುವ 148 ಹಾಡಿಗಳಲ್ಲೂ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಸಿದರು.

 ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಮಹದೇವ, ಮಧು, ಗಿರೀಶ್, ಮುರುಗೇಶ್ ಇದ್ದರು.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

7 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

8 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

8 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

8 hours ago