ಚಾಮರಾಜನಗರ ಜಿಲ್ಲೆಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಗುಂಡ್ಲು ಪೇಟೆ, ಹನೂರು ತಾಲೂಕು ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಂವಿ ಧಾನ ಪೀಠಿಕೆಯನ್ನು ಓದಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಾವಿರಾರು ವಿದ್ಯಾರ್ಥಿಗಳು, ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಸಂವಿಧಾನ ಪೀಠಿಕೆಯನ್ನು ಓದಿದರು.

ಇದಕ್ಕೂ ಮುನ್ನ ನಗರದ ಜಿಲ್ಲಾಡಳಿತ ಭವನದ ಮುಂಬಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಸಾವಿರಾರು ವಿದ್ಯಾರ್ಥಿಗಳು, ಅಧಿಕಾರಿಗಳೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆ ಮಾದರಿಯನ್ನು ಒಳಗೊಂಡ ರಥದ ಜಾಥಾ ನಡೆಯಿತು.

ಜಾಥಾವು ಬಿ.ರಾಚಯ್ಯ ಜೋಡಿರಸ್ತೆ, ಭುವನೇಶ್ವರಿ ವೃತ್ತ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಗುಂಡ್ಲುಪೇಟೆ ವೃತ್ತ, ದೊಡ್ಡಂಗಡಿ ಬೀದಿ, ವೀರಭದ್ರೇಶ್ವರ ದೇವಸ್ಥಾನದ ಮೂಲಕ ಅಂಬೇಡ್ಕರ್ ಕ್ರೀಡಾಂಗಣವನ್ನು ತಲುಪಿತು. ಆ ನಂತರ ನಡೆದ ಕಾರ್ಯಕ್ರಮದಲ್ಲಿ ಏಕಕಾಲದಲ್ಲಿ ಸಂವಿಧಾನ ಪೀಠಿಕೆಯನ್ನು ಓದಲಾಯಿತು. ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮವನ್ನು ಲೈವ್ ಸ್ಟ್ರೀಮಿಂಗ್ ಮೂಲಕ ಪ್ರಸಾರವಾಯಿತು.

ಈ ಸಂದರ್ಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಬಿಆರ್‌ಟಿ ಹುಲಿ ಯೋಜನೆ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಶ್ವೇಶ್ವರಯ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ.ಸವಿತಾ, ಡಿಡಿಪಿಯು ಮಂಜುನಾಥ ಪ್ರಸನ್ನ ಸೇರಿದಂತೆ ಇತರರಿದ್ದರು.

Ashika S

Recent Posts

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

16 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

27 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

42 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

2 hours ago