News Karnataka Kannada
Sunday, April 28 2024
ಚಾಮರಾಜನಗರ

ನಾನು ಹುಬ್ಬಳಿ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಲ್ಲ: ಜಗದೀಶ್ ಶೆಟ್ಟರ್

ನಾನು ಹುಬ್ಬಳಿ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಲ್ಲ ಹೈಕಮಾಂಡ್ ಅವಕಾಶ ಕೊಟ್ಟರೆ ಸ್ಪರ್ಧಿಸುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
Photo Credit : News Kannada

ಚಾಮರಾಜನಗರ: ನಾನು ಹುಬ್ಬಳಿ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಲ್ಲ ಹೈಕಮಾಂಡ್ ಅವಕಾಶ ಕೊಟ್ಟರೆ ಸ್ಪರ್ಧಿಸುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾದ್ಯಮವರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್,ಕಾಂಗ್ರೆಸ್ ನ ನಮ್ಮ ಅಭಿಮಾನಿಗಳು ಬಿಜೆಪಿಗೆ ಬರಲು ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಮತ್ತಷ್ಟು ಮಂದಿ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಆಗುವ ಬಗ್ಗೆ ಮಾಹಿತಿ ನೀಡಿದರು.

ರೈತರಿಗೆ ಅನುಕೂಲವಾಗುವ ಹಾಗೆ ಕೇಂದ್ರ ಸರ್ಕಾರ ಕಾರ್ಯಕ್ರಮ ಹಾಕಿಕೊಂಡಿದೆ. ನರೇಂದ್ರ ಮೋದಿಯವರು ಅತೀ ಹೆಚ್ಚು ರೈತರಪರ ಯೋಜನೆ ಹಾಕಿಕೊಂಡಿದ್ದಾರೆ. ರೈತರ ಹಿತಾಸಕ್ತಿ ಕಾಪಾಡಲು ಬಿಜೆಪಿ ಶತ ಸಿದ್ದಎಂದು ಹೇಳಿದರು.

ರಾಜ್ಯದಲ್ಲಿ ಜೆಡಿಎಸ್ ನೊಂದಿಗೆ ಬಿಜೆಪಿ ಮೈತ್ರಿ ಕುರಿತು ವರಿಷ್ಠರು ತೀರ್ಮಾನ ಮಾಡಲಿದ್ದಾರೆ , ಅಮಿತ್ ಷಾ ಬಂದಿದ್ದು ಸುತ್ತೂರು ಜಾತ್ರೆಗಾಗಿ ಅಲ್ಲಿಗೆ ನಾನು ಹೋಗಿಲ್ಲ ಅಮಿತ್ ಷಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಏನು ನಡೆದಿದೆ ಎಂದು ನನಗೆ ತಿಳಿದಿಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು