ಚಾಮರಾಜನಗರ

ಬಂಡೀಪುರದಲ್ಲಿ ಅನಾಥ ಆನೆ ಮರಿಗೆ ಪೋಷಕರಾದ ಕಾವಡಿ ದಂಪತಿ

ಚಾಮರಾಜನಗರ: ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ‘ದಿ ಎಲೆಫೆಂಟ್ ವಿಸ್ಪರರ್ಸ್’ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ ಪೋಷಣೆ ಮಾಡಿ ದಂಪತಿ ಗಮನ ಸೆಳೆದಿದ್ದಾರೆ.

ಹೆತ್ತ ತಾಯಿಯಿಂದ ಬೇರೆಯಾದ ಮರಿ ಆನೆಗೆ ಕಾವಡಿ ಕುಟುಂಬವೊಂದು ತಂದೆ ತಾಯಿಯಂತೆ ಪೋಷಣೆ ಮಾಡುತ್ತಿದೆ. ಆನೆ ಮರಿ ಹುಟ್ಟಿದ ಏಳೇ ದಿನಕ್ಕೆ ತಾಯಿಯಿಂದ ಬೇರ್ಪಟ್ಟಿದ್ದು ಏಳು ದಿನದ ಮಗುವಿನಿಂದಲೇ ಈ ದಂಪತಿ ಆನೆ ಮರಿಯನ್ನು ಸಾಕುತ್ತಿದ್ದಾರೆ. ಈ ಮರಿ ಆನೆಗೆ ವೇದ ಎಂದು ಹೆಸರಿಡಲಾಗಿದೆ. ಅನಾಥ ಆನೆ ವೇದ ಅರೆಕ್ಷಣವು ರಾಜು ಹಾಗೂ ಆತನ ಪತ್ನಿಯನ್ನ ಬಿಟ್ಟಿರದು. ಪ್ರತಿ ದಿನ 12 ಲೀಟರ್ ಹಾಲು ಕುಡಿಯುವ ವೇದ, ಕಾವಾಡಿ ದಂಪತಿಯ ಮುದ್ದಿನ ಮಗುವಾಗಿದೆ. ದಂಪತಿಗಳ ನಿಸ್ವಾರ್ಥ ಸೇವೆಗೆ ಬಂಡಿಪುರ ಅರಣ್ಯ ಅಧಿಕಾರಿಗಳ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮರಿಯಾನೆ ಪೋಷಣೆಗೆ ಬೇಕಾದ ಆರ್ಥಿಕ ಸಹಾಯವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದಾರೆ.

Gayathri SG

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

60 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

1 hour ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

3 hours ago