News Karnataka Kannada
Monday, April 15 2024
Cricket
ಚಾಮರಾಜನಗರ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್

ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಪಂ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಪ್ರಯಾಣಿಕರು ಪಾರಾಗಿರುವ ಘಟನೆ ನಡೆದಿದೆ.
Photo Credit : News Kannada

ಚಾಮರಾಜನಗರ: ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಪಂ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಪ್ರಯಾಣಿಕರು ಪಾರಾಗಿರುವ ಘಟನೆ ನಡೆದಿದೆ.

ಕೊಳ್ಳೇಗಾಲ ಬಸ್ ನಿಲ್ದಾಣದಿಂದ ಹನೂರು ತಾಲೂಕಿನ ಮಂಗಲ, ಕಣ್ಣೂರು, ಚೆನ್ನಲಿಂಗನಹಳ್ಳಿ, ಲೋಕ್ಕನಹಳ್ಳಿ ಮಾರ್ಗ ವಾಗಿ ಪಿ.ಜಿ.ಪಾಳ್ಯ ಗ್ರಾ.ಪಂ. ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ದೊಡ್ಡಿ, ಕುಡುವಾಳೆ ದೊಡ್ಡಿ, ಪಿಜಿ ಪಾಳ್ಯ ಹುತ್ತೂರು, ಒಡೆಯರಪಾಳ್ಯದ ಮೂಲಕ ಬೈಲೂರಿಗೆ ಹೋಗಿ ವಾಪಾಸ್ ಆಗುತ್ತಿದ್ದ ಬಸ್ ಚಿಕ್ಕರಂಗಶೆಟ್ಟಿ ದೊಡ್ಡಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಅರಣ್ಯ ಇಲಾಖೆಯ ಕಾರಿಡಾರ್ ಗುಂಡಿಗೆ ವಾಲಿದೆ. ಅದೃಷ್ಟವ ಶಾತ್ ಕಾರಿಡಾರ್ ಕಂದಕಕ್ಕೆ ನುಗ್ಗಿದ ಪರಿಣಾಮ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣಪುಟ್ಟ ಗಾಯಗಳಾಗಿದ್ದು
ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಪಿ.ಜಿ.ಪಾಳ್ಯ ಹಾಗೂ ಒಡೆಯರಪಾಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಶಿಕ್ಷಕರೇ ತುಂಬಿದ್ದ ಬಸ್: ಈ ಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಸಾರಿಗೆ ಬಸ್‌ಗಳು ಓಡಾಡುತ್ತವೆ. ಇದರಿಂದ ತಾಲೂಕಿನ ಗಡಿಯಂಚಿನ ಗ್ರಾಮಗಳ ಶಾಲೆಗಳಿಗೆ ಈ ಬಸ್‌ನಲ್ಲಿಯೇ ಹೆಚ್ಚಿನ ಶಿಕ್ಷಕರು ತೆರಳುತ್ತಾರೆ. ಹಾಗೆಯೇ ಇಂದು ಕೂಡ ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರೇ ಬಸ್‌ನಲ್ಲಿದ್ದಿದ್ದು ಕಂಡುಬಂದಿದೆ. ಆದರೆ, ಸಣ್ಣಪುಟ್ಟ ಗಾಯ ಹೊರತುಪಡಿಸಿ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನಕರ ವಿಚಾರ. ಈ ಹಿಂದೆಯೂ ಇದೇ ಮಾರ್ಗದಲ್ಲಿ ಸಾರಿಗೆ ಬಸ್ ಮಗುಚಿ ಮೂವರು ಪ್ರಯಾಣಿಕರು ಮೃತಪಟ್ಟಿರುವ ಉದಾಹರಣೆಗಳಿವೆ.

ಕೆಎಸ್‌ಆರ್‌ಟಿಸಿ ಬಸ್ ಅಪಘಾತ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪರಿಸರ ಪ್ರೇಮಿ ಕೃಷ್ಣ ಪ್ರತಿಕ್ರಿಯಿಸಿ, ಅಪಘಾತಕ್ಕೆ ಬಸ್‌ನ ಚಾಲಕ ಹಾಗೂ ನಿರ್ವಾಹಕರೇ ಕಾರಣ. ಕೂಡಲೇ ಇವರನ್ನು ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಭಾಗದಲ್ಲಿ ಸಂಚರಿಸುವ ಬಸ್‌ಗಳು ಹಳೆಯದಾಗಿದ್ದು ಸುಸಜ್ಜಿತ ಬಸ್‌ಗಳನ್ನು ಓಡಿಸಲು ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು