ಚಾಮರಾಜನಗರ

ಚಾಮರಾಜನಗರದಲ್ಲಿ ಲಕ್ಷಾಂತರ ರೂ ಮೌಲ್ಯದ ಮದ್ಯ ನಾಶ

ಚಾಮರಾಜನಗರ: ಚಾಮರಾಜನಗರ ವಲಯ ವ್ಯಾಪ್ತಿಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆಯಿಂದ ದಾಖಲಿಸಲಾದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿದ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ನಾಶಪಡಿಸಲಾಗಿದೆ.

ಅಬಕಾರಿ ಇಲಾಖೆಯು ವಿವಿಧೆಡೆ ದಾಳಿ ಮಾಡಿದ ವೇಳೆ ದೊರೆತ ಅಂದಾಜು ಮೌಲ್ಯ 2,30,000 ರೂ ಮೌಲ್ಯದ 487.560 ಲೀ ಮದ್ಯ ಹಾಗೂ 76.900 ಲೀ ಬಿಯರ್ ದೊರೆತಿತ್ತು. ಈ ಮದ್ಯವನ್ನು ಚಾಮರಾಜನಗರ ವಲಯ ಕಚೇರಿಯ ಆವರಣದಲ್ಲಿ ಚಾಮರಾಜನಗರ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಎಂ.ಡಿ.ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ನಾಶಪಡಿಸಲಾಯಿತು.

ಈ ಸಂದರ್ಭ ವಲಯ ಅಬಕಾರಿ ನಿರೀಕ್ಷಕರಾದ ಸಿ.ಎಂ. ಮಹದೇವ, ಚಾಮರಾಜನಗರ ಉಪವಿಭಾಗ ಅಬಕಾರಿ ನಿರೀಕ್ಷಕರಾದ ಎಂ.ಬಿ. ಉಮಾಶಂಕರ್, ಚಾಮರಾಜನಗರ ತಾಲೂಕು ಕಚೇರಿಯ ಗ್ರಾಮ ಆಡಳಿತ ಅಧಿಕಾರಿ ಎಸ್. ಉಜ್ವಲ್, ಕೆ.ಎಸ್.ಬಿ.ಸಿ.ಎಲ್. ಡಿಪೋ ಸಹಾಯಕ ವ್ಯವಸ್ಥಾಪಕರಾದ ಕೆ.ಎಂ. ಸಿದ್ದರಾಜು ಹಾಗೂ ಚಾಮರಾಜನಗರ ವಲಯದ ಸಿಬ್ಬಂದಿ ಆರ್. ರಾಜೇಶ್, ಸಿ. ಮಣಿಕಂಠ, ಆರ್. ರಾಜು ಹಾಜರಿದ್ದರು.

Ashika S

Recent Posts

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

15 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

1 hour ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 hours ago