News Karnataka Kannada
Tuesday, April 23 2024
Cricket
ಚಾಮರಾಜನಗರ

ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ವಶಕ್ಕೆ ಪಡೆದ ಮಧ್ಯಪ್ರದೇಶ ಪೊಲೀಸರು

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿದ್ದ ಫೆ.13 ರ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶದ ಪೊಲೀಸರು ಸೋಮವಾರ ಮುಂಜಾನೆ ವಶಕ್ಕೆ ಪಡೆದಿದ್ದಾರೆ.
Photo Credit : News Kannada

ಚಾಮರಾಜನಗರ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿದ್ದ ಫೆ.13 ರ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶದ ಪೊಲೀಸರು ಸೋಮವಾರ ಮುಂಜಾನೆ ವಶಕ್ಕೆ ಪಡೆದಿದ್ದಾರೆ.

ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ದೆಹಲಿಗೆ 130 ಕ್ಕೂ ಅಧಿಕ ರೈತ ಹೋರಾಟಗಾರರು ಪ್ರಯಾಣ ಬೆಳೆಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮಧ್ಯಪ್ರದೇಶದ ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಚಾಮರಾಜನಗರದಿಂದ ಕಬ್ಬು ಬೆಳೆಗಾರರ ಸಂಘದ ಮೂಕಹಳ್ಳಿ ಮಹದೇವಸ್ವಾಮಿ, ಮೂಡ್ಲುಪುರ ಶಿವಮೂರ್ತಿ, ರೇವಣ್ಣ, ಉಡಿಗಾಲ ಲೋಕೇಶ್, ಬಸವಣ್ಣ, ಶೀಲಾ, ಪುಷ್ಪಾ, ಕಲಾವತಿ ಸೇರಿದಂತೆ 30 ಕ್ಕೂ ಅಧಿಕ ಮಂದಿ ತೆರಳಿದ್ದರು. ಮೈಸೂರಿನಿಂದಲೂ 70 ಕ್ಕೂ ಹೆಚ್ಚು ಮಂದಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು.

ರೈತರ ಸಾಲಮನ್ನಾ ಮಾಡಬೇಕು. ಸ್ವಾಮಿನಾಥನ್ ವರದಿ ಜಾರಿಯಾಗಬೇಕು. ಎಂಎಸ್​ಪಿ ನಿಗದಿಯಾಗಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶದ ಬಹುಪಾಲು ರೈತ ಸಂಘಟನೆಗಳು ರಾಷ್ಟ್ರೀಯ ಕಿಸಾನ್ ಒಕ್ಕೂಟ ರಚನೆ ಮಾಡಿಕೊಂಡು ಫೆ.13 ರಂದು ಹೋರಾಟಕ್ಕೆ ಕರೆ ಕೊಟ್ಟಿವೆ.

ಇನ್ನು, ಚಾಮರಾಜನಗರ ಕಬ್ಬು ಬೆಳೆಗಾರ ಸಂಘದ ಕಾರ್ಯದರ್ಶಿ ಎಚ್. ಮೂಕಹಳ್ಳಿ ಮಹದೇವಸ್ವಾಮಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಮುಂಜಾನೆ ಮಲಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆಯುವ ವೇಳೆ ಕುರುಬೂರು ಶಾಂತಕುಮಾರ್ ಅವರ ಪತ್ನಿ ಪದ್ಮಾ ಶಾಂತಕುಮಾರ್ ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ‌ ರೈಲಿನಲ್ಲಿದ್ದ 150 ಕ್ಕೂ ಅಧಿಕ ಮಂದಿಯನ್ನು ಛತ್ರವೊಂದರಲ್ಲಿ ಇಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು