News Karnataka Kannada
Sunday, May 19 2024
ಸಮುದಾಯ

ಚಾಮರಾಜನಗರದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Madivala Machideva Jayanthi celebrations in Chamarajanagar
Photo Credit : By Author

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ನಗರದಲ್ಲಿ ಆದ್ದೂರಿಯಾಗಿ ಆಚರಿಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಡಿವಾಳ ಮಾಚಿದೇವರು ನೇರ ಹಾಗೂ ನಿಷ್ಠುರ ಶರಣರಾಗಿದ್ದರು. ಅವರ ವಚನಗಳ ಸಾರವನ್ನು ಅರ್ಥ ಮಾಡಿಕೊಂಡು ನಾವೆಲ್ಲರೂ ಮುನ್ನೆಡೆಯಬೇಕು ಎಂದರು.

ಮಡಿವಾಳ ಸಮುದಾಯ ಶಿಕ್ಷಣ ಸೌಲಭ್ಯಗಳನ್ನು ಪಡೆಯಬೇಕು. ಸಮುದಾಯವು ಒಗ್ಗಟ್ಟಾಗಿ ಹೋರಾಟ ಮಾಡಿದಾಗ ಎಲ್ಲಾ ಫಲ ಸಿಗಲಿದೆ. ನಿಮ್ಮೊಂದಿಗೆ ನಾವು ಸಹ ಇದ್ದೇವೆ. ನಿಮ್ಮ ಸವಲತ್ತುಗಳಿಗೆ ಎಲ್ಲಾ ನೆರವು ನೀಡುತ್ತೇವೆ. ನಗರದಲ್ಲಿ ದೋಬಿಘಾಟ್ ನಿರ್ಮಾಣಕ್ಕೆ ಅಗತ್ಯ ಸಹಾಯ ಮಾಡಲಾಗುವುದು. ಜಿಲ್ಲಾ ಸಮುದಾಯ ಭವನಕ್ಕೂ ನೆರವು ಒದಗಿಸಲಾಗುವುದೆಂದು ಶಾಸಕರಾದ ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ಕಾರ್ಯಕ್ರಮ ಉದ್ಘಾಟನೆ ನೆರೆವೇರಿಸಿದ ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ ಅವರು ಮಡಿವಾಳ ಮಾಚಿದೇವ ಅವರ ವಚನಗಳು ಅರ್ಥಪೂರ್ಣವಾಗಿವೆ. ಅವರ ಶಕ್ತಿ, ಪವಾಡಗಳ ಬಗ್ಗೆ ಸಾಕಷ್ಟು ಕೇಳಿದ್ದೇವೆ. ಇವರ ಆದರ್ಶಗಳನ್ನು ಪಾಲನೆ ಮಾಡಬೇಕು ಎಂದ ಅವರು ಮಡಿವಾಳ ಮಾಚಿದೇವ ಜಯಂತಿ ಶುಭಾಶಯಗಳನ್ನು ತಿಳಿಸಿದರು.

ವಿಚಾರವಾದಿಗಳು, ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ. ಹ. ರಾ. ಮಹೇಶ್ ಅವರು ಮಾತನಾಡಿ ಮಡಿವಾಳ ಮಾಚಿದೇವರು 12ನೇ ಶತಮಾನದ ವಚನ ಸಾಹಿತ್ಯಕಾರರ ಸಾಲಿನಲ್ಲಿ ತನ್ನದೇ ಆದ ವಿಭಿನ್ನ ಶೈಲಿಯಿಂದ ಗುರುತಿಸಿಕೊಂಡಿದ್ದರು. ಮಾಚಿದೇವರು ಅಂದಿನ ಸಮಾಜದಲ್ಲಿ ಅಸಮಾನತೆ, ಮೂಢನಂಬಿಕೆ, ಲಿಂಗ ತಾರತಮ್ಯದಂತಹ ಹಲವಾರು ಅನಿಷ್ಠಗಳ ಪದ್ಧತಿಗಳ ವಿರುದ್ಧ ದನಿ ಎತ್ತಿದರು ಎಂದರು.

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ. ರಾಜು ಎಂ. ತಲ್ಲೂರು ಅವರು ಮಾತನಾಡಿ ನಿಗಮದಿಂದ ನೀಡಲಾಗುವ ಗಂಗಾ ಕಲ್ಯಾಣ, ಶೈಕ್ಷಣಿಕ ಸಾಲ ಸೇರಿದಂತೆ ಹಲವಾರು ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಮಡಿವಾಳ ಸಮುದಾಯ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಧೃಢವಾಗಿ ಬೆಳೆಯಬೇಕು. ನಿಗಮಕ್ಕೆ ಅರ್ಜಿ ಹಾಕಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ದಿವ್ಯ ಸಾನಿಧ್ಯ ವಹಿಸಿದ ಚಿತ್ರದುರ್ಗದ ಶ್ರೀ ಮಾಚಿದೇವ ಮಹಾ ಸಂಸ್ಥಾನ ಮಠದ ಜಗದ್ಗುರು ಡಾ. ಬಸವ ಮಾಚಿದೇವ ಮಹಾಸ್ವಾಮಿಜೀಯವರ ಸಂದೇಶವನ್ನು ಕಾರ್ಯಕ್ರಮದಲ್ಲಿ ವಾಚಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ಪೂವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್. ಗುರುಲಿಂಗಯ್ಯ, ಸಮುದಾಯದ ಮುಖಂಡರಾದ ದುಂಡುಮಾದಯ್ಯ, ಸಿದ್ದಯ್ಯ ಅವರು ಕಾರ್ಯಕ್ರಮದಲ್ಲಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು