News Karnataka Kannada
Thursday, April 25 2024
ಚಾಮರಾಜನಗರ

ಪಿಕಾರ್ಡ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಚೆನ್ನಮಲ್ಲಿಪುರ ಬಸವಣ್ಣ ಆಯ್ಕೆ

ಪಟ್ಟಣದ ಪಿಕಾರ್ಡ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಚೆನ್ನಮಲ್ಲಿಪುರ ಬಸವಣ್ಣ ಹಾಗೂ ಉಪಾಧ್ಯಕ್ಷರಾಗಿ ಮಳವಳ್ಳಿ ಮಹೇಶ್‌ ಅವಿರೋಧ ಆಯ್ಕೆಯಾದರು.
Photo Credit : News Kannada

ಗುಂಡ್ಲುಪೇಟೆ: ಪಟ್ಟಣದ ಪಿಕಾರ್ಡ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಚೆನ್ನಮಲ್ಲಿಪುರ ಬಸವಣ್ಣ ಹಾಗೂ ಉಪಾಧ್ಯಕ್ಷರಾಗಿ ಮಳವಳ್ಳಿ ಮಹೇಶ್‌ ಅವಿರೋಧ ಆಯ್ಕೆಯಾದರು.

ಪಟ್ಟಣದ ಪಿಕಾರ್ಡ್ ಬ್ಯಾಂಕ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚನ್ನಮಲ್ಲಿಪುರ ಬಸವಣ್ಣ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಳವಳ್ಳಿ ಮಹೇಶ್ ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆ ಇಬ್ಬರ ಅವಿರೋಧ ಆಯ್ಕೆಯನ್ನು ಚುನಾವಣೆ ಅಧಿಕಾರಿಯಾಗಿದ್ದ ಸಹಕಾರ ಅಧಿಕಾರಿ ಪದ್ಮನಾಭ್ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಪಿಕಾರ್ಡ್ ಬ್ಯಾಂಕ್ ನೂತನ ಅಧ್ಯಕ್ಷ ಚೆನ್ನಮಲ್ಲಿಪುರ ಬಸವಣ್ಣ ಮಾತನಾಡಿ, ಪಿಕಾರ್ಡ್ ರೈತರ ಬ್ಯಾಂಕ್, ಎಲ್ಲಾ ನಿರ್ದೇಶಕರ ಸಹಕಾರದೊಂದಿಗೆ ಮತ್ತಷ್ಟು ಅಭಿವೃದ್ಧಿ ಪಡಿಸಲು ಪ್ರಯತ್ನಿಸುತ್ತೇನೆ.

ಗ್ರಾಮೀಣ ಭಾಗದ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡುವ ಮೂಲಕ ಆರ್ಥಿಕವಾಗಿ ರೈತರನ್ನು ಸದೃಢರನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ಪಿಕಾರ್ಡ್ ಬ್ಯಾಂಕ್ ರೈತರಿಗೆ ಹತ್ತಿರವಾಗಿರುವ ಮತ್ತು ಅವರ ಕಷ್ಟಕ್ಕೆ ಸಂದಿಸುವ ಸಂಸ್ಥೆಯಾಗಿದ್ದು, ಸರ್ಕಾರದಿಂದ ಸಾಲವನ್ನು ಪಡೆದು ಅದನ್ನು ರೈತರಿಗೆ ನೀಡುವ ಮುಖ್ಯ ಜವಾಬ್ದಾರಿಯಾಗಿದೆ. ಅದರ ಜೊತೆಗೆ ರೈತರಿಂದ ಬಾಕಿ ಉಳಿದಿರುವ ಸಾಲವನ್ನು ವಸೂಲಾತಿ ಮಾಡಿ ಬ್ಯಾಂಕಿನ ಅಭಿವೃದ್ಧಿ ಮಾಡಬೇಕು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು