News Karnataka Kannada
Saturday, April 13 2024
Cricket
ಚಾಮರಾಜನಗರ

ಚಾಮರಾಜನಗರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಕೊರೆಸಲು ಅರ್ಜಿದಾರರಿಂದ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ನಾಗರಾಜು ಎಂಬುವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Photo Credit : News Kannada

ಚಾಮರಾಜನಗರ: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಕೊರೆಸಲು ಅರ್ಜಿದಾರರಿಂದ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ನಾಗರಾಜು ಎಂಬುವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಾಲ್ಲೂಕಿನ ಫಲಾನುಭವಿಯೊಬ್ಬರು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಅವರ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಬೇಕಾಗಿತ್ತು. ಕೆಲಸ ಮಾಡಿಕೊಡಲು ನಾಗರಾಜು ಅವರು 10 ಸಾವಿರ ರೂ. ಲಂಚ ಕೇಳಿದ್ದರು. ಈ ಬಗ್ಗೆ ಫಲಾನುಭವಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಶನಿವಾರ ನಗರದಲ್ಲಿ ನಾಗರಾಜು, ದೂರುದಾರರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅವರನ್ನು ಬಂಧಿಸಿ, 10 ಸಾವಿರ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಮ್ಯಾಥ್ಯೂ ಥಾಮಸ್‌ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಶಶಿಕುಮಾರ್ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು