News Karnataka Kannada
Friday, May 03 2024
ಚಾಮರಾಜನಗರ

ಚಾಮರಾಜನಗರ: ಪೊಲೀಸ್ ಮುಖ್ಯಪೇದೆ ಹೃದಯಾಘಾತದಿಂದ ನಿಧನ

Police head constable dies of heart attack
Photo Credit : News Kannada

ಚಾಮರಾಜನಗರ: ಕಳೆದ ಎರಡು ದಿನಗಳ ಹಿಂದೆ ಕರ್ತವ್ಯಕ್ಕೆ ಬಂದಿದ್ದ ಕೆ.ಎಸ್.ಆರ್.ಪಿ ಪೊಲೀಸ್ ಮುಖ್ಯಪೇದೆ ಮೋಹನ್(44) ಅವರು ಶುಕ್ರವಾರ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಸಾರ್ವಜನಿಕರ ವಿದ್ಯಾರ್ಥಿನಿಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದು, ಈ ಸಂಬಂಧ ಗಲಭೆಗಳು ಉಂಟಾಗದಂತೆ ಎಚ್ಚರ ವಹಿಸಲು ಮುನ್ನೆಚ್ಚರಿಕೆಕ್ರಮವಾಗಿ ಕೆ.ಎಸ್.ಆರ್‌.ಪಿ ಮೈಸೂರು ಬೆಟಾಲಿಯನ್ 23 ಮಂದಿ ಕೊಳ್ಳೇಗಾಲದಲ್ಲಿ ಕರ್ತವ್ಯ ಮಾಡಲು ಕಳೆದ ಎರಡು ದಿನಗಳ ಹಿಂದೆ ಬಂದಿದ್ದವರನ್ನು ಇಲ್ಲಿನ ಸಾರ್ವಜನಿಕರ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಳ್ಳಲು ಅವಕಾಶ ಮಾಡಿಕೊಡಲಾಯಿತು.

ಅದೇ ರೀತಿ ಗುರುವಾರ ಕರ್ತವ್ಯ ಮುಗಿಸಿಕೊಂಡು ಹಾಸ್ಟೆಲ್ ನಲ್ಲಿ ತಂಗಿದ್ದ ಮುಖ್ಯಪೇದೆ ಮೋಹನ್ ಕುಟುಂಬದ ಜೊತೆ ಪೋನ್ ನಲ್ಲಿ ಮಾತನಾಡಿ ಮಲಗಿದ್ದಾರೆ.

ಶುಕ್ರವಾರ ಬೆಳಿಗ್ಗೆ ಪೊಲೀಸರೆಲ್ಲಾ ಎದ್ದು ರೋಲ್ ಕಾಲ್ ಗೆ ರೆಡಿಯಾಗದೇ ಮಲಗಿದ್ದ ಮೋಹನ್ ನನ್ನು ಎಬ್ಬಿಸಲು ಹೋದ ಜೊತೆಯಲ್ಲಿದ್ದ ಪೊಲೀಸರು ಹೋಗಿ ನೋಡಿದಾಗ ಸಾವನ್ನಪ್ಪಿರುವುದು ಕಂಡು ಬಂದಿದೆ.

ಇಲ್ಲಿನ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿ ಬಳಿಕ ಮೃತ್ತದೇಹವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ತಂದಿರಿಸಿದರು. ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಿದರು.

ಮಡಿಕೇರಿ ಜಿಲ್ಲೆಯ ನಾಪ್ಲೋಕು ಹೋಬಳಿಯ ಕಕ್ಕಬೇ ಗ್ರಾಮದ ವಾಸಿಯಾದ ಮೋಹನ್ ರವರು ಕಳೆದ 24 ವರ್ಷ ಹಿಂದೆ 1999 ಬ್ಯಾಚ್ ನಲ್ಲಿ ಕರ್ತವ್ಯಕ್ಕೆ ಸೇರಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಪತ್ನಿ ಹಾಗೂ ಎರಡು ಹೆಣ್ಣು ಮಕ್ಕಳದೊಂದಿಗೆ ಮೈಸೂರಿನ ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸ ಇದ್ದರು.

ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಡಿವೈಎಸ್ಪಿ ಸೋಮೇಗೌಡ, ವೃತ್ತ ನಿರೀಕ್ಷಕ ಕೃಷ್ಣಪ್ಪ, ಮೈಸೂರು ಕೆ‌.ಎಸ್.ಆರ್.ಪಿ ಡಿವೈಎಸ್ಪಿ ರಾಜು, ಟೌನ್ ಸಬ್ ಇನ್ಸ್‌ಪೆಕ್ಟರ್ ಮಹೇಶ್ ಕುಮಾರ್ ಹಾಗೂ ಸಿಬ್ಬಂದಿಗಳು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು