ಚಾಮರಾಜನಗರದಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ: ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ  ಮಹಿಳಾ ಕಾಂಗ್ರೆಸ್ ಘಟಕ  ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತಲ್ಲದೆ  ನಗರದ  ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆಯಲ್ಲಿ ಪಚ್ಚಪ್ಪ ವೃತ್ತಕ್ಕೆ ತೆರಳಿ ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರಲ್ಲದೆ, ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು. ಪ್ರಜ್ವಲ್‌ ಶಿಕ್ಷೆಯಾಗಬೇಕು ಎಂದು ಘೋಷಣೆ ಕೂಗಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಲತಾ ಜತ್ತಿ ಮಾತನಾಡಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅನೇಕ  ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾನೆ. ಇಂತಹ ನಾಯಕ ನಮಗೆ ಬೇಡ. ಕೆಲಸ ಕೇಳಿಕೊಂಡು ಹೋದ ಮಹಿಳೆಯರ ಮೇಲೂ ದೌರ್ಜನ್ಯ ನಡೆಸಿರುವುದು ಖಂಡನೀಯ ಮಾದರಿಯಾಗಿರಬೇಕಾದ ಶಾಸಕ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಠಿಣಶಿಕ್ಷೆಯಾಗಬೇಕು. ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು. ಆ ಮೂಲಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ನ್ಯಾಯ ಕೊಡಿಸಬೇಕು. ಅಲ್ಲದೇ ಮಹಿಳೆಯರಿಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ನಾಗರತ್ನ, ಬ್ಲಾಕ್ ಅಧ್ಯಕ್ಷೆ ನಾಗಶ್ರೀ, ಯಳಂದೂರು ಭಾಗ್ಯ, ಹನೂರು  ಸುವರ್ಣಾ, ಗುಂಡ್ಲುಪೇಟೆ ರತ್ನಮ್ಮ, ಕೊಳ್ಳೇಗಾಲ ಕೃಷ್ಣವೇಣಿ, ನಗರಸಭೆ ಸದಸ್ಯೆ ಕಲಾವತಿ, ಪದಾಧಿಕಾರಿಗಳಾದ ಪದ್ಮಪುರುಷೋತ್ತಮ, ಕಾವೇರಿ, ನಾಗಮ್ಮ ಸೇರಿದಂತೆ ಇತರರು ಭಾಗವಹಿಸಿದ್ದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago