ರೈತ ಮಹಿಳೆ ಮೇಲೆ ಸುಳ್ಳು ಪ್ರಕರಣ ಖಂಡಿಸಿ ಪ್ರತಿಭಟನೆ..

ಚಾಮರಾಜನಗರ :  ಹನೂರು ತಾಲ್ಲೂಕಿನ ಹೂಗ್ಯಂ ಅರಣ್ಯ ವಲಯದ ಸಿಬ್ಬಂದಿ ರೈತ ಮಹಿಳೆ ಮೇಲೆ ಹಲ್ಲೆ ನಡೆಸಿ, ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಪಟ್ಟಣದ ಎಂ ಜಿ ಎಸ್ ವಿ ಕಾಲೇಜು ಮೈದಾನದಲ್ಲಿ ಜಮಾಯಿಸಿದ ನೂರಾರು ರೈತ ಮುಖಂಡರು, ಅರಣ್ಯಾಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಚೇರಿಗೆ ಬರುವ ಪ್ರತಿಭಟನಾಕಾರರನ್ನು ತಡೆಗಟ್ಟುವ ಸಲುವಾಗಿ ಮುಚ್ಚಲಾಗಿದ್ದ ಕಚೇರಿಯ ಗೇಟ್‌ ನ್ನು ರೈತರು ತಳ್ಳಿ ಕಚೇರಿಯೊಳಗೆ ನುಗ್ಗಿದರು. ಈ ವೇಳೆ ಎಸ್‌ಐ ಮಹೇಶ್ ಪ್ರತಿಭಟನಾಕಾರರನ್ನು ತಡೆಯುವ ವೇಳೆ ಘರ್ಷಣೆ ಉಂಟಾಗಿ ಅರ್ಧ ಗಂಟೆ ಕಾಲ ರೈತರು, ಅಧಿಕಾರಿ ನಡುವೆ ಚರ್ಚೆ ನಡೆದು, ಬಳಿಕ ಸಬ್ ಇನ್ಸ್‌ಪೆಕ್ಟರ್ ಕ್ಷಮೆಯಾಚಿಸಿದ ಬಳಿಕ ಪ್ರತಿಭಟನಾಕಾರರು ಪ್ರತಿಭಟನೆ ಮುಂದುವರಿಸಿದರು.

ಡಿ.ಎಫ್.ಒ.ಕಚೇರಿಗೆ ತೆರಳಿದ ಪ್ರತಿಭಟನಾ ಕಾರರು, ಕಳೆದ ತಿಂಗಳ 22 ರಂದು ಹೂಗ್ಯಂ ಗ್ರಾಮದಲ್ಲಿ ಅರಣ್ಯ ಇಲಾಖೆಯವರು ರೈತ ಮಹಿಳೆಯ ಕುಟುಂಬದ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ರೈತ ಮಹಿಳೆ ಕುಟುಂಬದ ಮೇಲೆ ಹಲ್ಲೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಮಾನತ್ತು ಗೊಳಿಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಆರ್. ನರೇಂದ್ರರವರ ಜೊತೆಗೂಡಿದ ರೈತರು, ಅರಣ್ಯ ಇಲಾಖೆ ಡಿಸಿಎಫ್ ಸಂತೋಷ್ ಕುಮಾರ್ ಜತೆ ಚರ್ಚೆ ನಡೆಸಿದರು. ನಂತರ ಅರಣ್ಯಾಧಿಕಾರಿಗಳು ಮಾತನಾಡಿ, ರೈತರ ಕ್ಷಮೆಯಾಚಿಸಿ, ಹಲ್ಲೆ ಮಾಡಿದ ಸಿಬ್ಬಂದಿಯನ್ನು ಒಂದು ವಾರದಲ್ಲಿ ಬೇರೆಡೆಗೆ ವರ್ಗಾವಣೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆಗಳು ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಟ್ಟರು.

Nisarga K

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

9 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

24 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

28 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

51 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago