ಚಾಮರಾಜನಗರ

ಕುಂದಗೋಳದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪೂರ್ವಭಾವಿ ಸಭೆ

ಕುಂದಗೋಳ: ಪೋಲಿಯೊ ಬಗ್ಗೆ ಎಲ್ಲರೂ ಜಾಗೃತರಾಗಿ, ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿದ್ಯಾವತಿ ಪಾಟೀಲ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ನಡೆದ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, 0-5 ವರ್ಷದ ಒಟ್ಟು 14,498 ಮಕ್ಕಳಿಗೆ ಈ ಬಾರಿ ಮಾರ್ಚ್ 3 ರಿಂದ ಪೋಲಿಯೊ ಹನಿ ಹಾಕಲಾಗುವುದು. 99 ಬೂತ್‌ಗಳಲ್ಲಿ 396 ಸದಸ್ಯರು, 104 ಗುಂಪುಗಳು, 19 ಮೇಲ್ವಿಚಾರಕರು ಇತರೆ ಸಹಾಯಕರು ಕಾರ್ಯ ನಿರ್ವಹಿಸಲಿದ್ದಾರೆ’ ಎಂದರು.

6 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಪೋಲಿಯೊ ಲಸಿಕೆ ತಲುಪಿಸಲಾಗಿದೆ. ಭಿತ್ತಿ ಪತ್ರ, ಧ್ವನಿ ವರ್ಧಕ, ಜಾಥಾ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪೋಲಿಯೊ ಕಾರ್ಯಕ್ರಮದಂದು ಹೊರಗುಳಿದ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಲಾಗುವುದು’ ಎಂದು ಮಾಹಿತಿ ನೀಡಿದರು.

ಹೆಸ್ಕಾಂ ಎಂಜಿನಿಯರ್ ವಿರೇಶ್ ಮಠದ, ಸಿಡಿಪಿಒ ಶಂಶಾದ ಕಂದಗಲ್, ರವೀಂದ್ರ ಬೋವಿಯಾರ್, ಜೆ.ಜೆ ಕಟಾಪುರಿಮಠ, ಮಹೇಶ ಶಾನಬಾಳ, ವಿರೇಶ ಅಂಗಡಿ, ಮಾಲಾ ಕರಡಿಗುದ್ದು, ಡಾ. ಸಂಜನಾ ಪಾಟೀಲ ಇದ್ದರು.

Ashika S

Recent Posts

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

3 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

16 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

11 hours ago