ನೀರು ತರಲು ಹೋಗಿದ್ದ ಕ್ಯಾಂಪ್ ವಾಚರ್ ಮೇಲೆ ಪುಂಡಾನೆ ದಾಳಿ

ಚಾಮರಾಜನಗರ: ನೀರು ತರಲು ಹೋಗಿದ್ದ ಕ್ಯಾಂಪ್ ವಾಚರ್ ಮೇಲೆ ಪುಂಡಾನೆ ದಾಳಿ ನಡೆಸಿದ ಪರಿಣಾಮ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಇಂದು ನಡೆದಿದೆ.

ಗಾಯಗೊಂಡ ವ್ಯಕ್ತಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಸ್ತೂರು ಗ್ರಾಮದ ನಿವಾಸಿ ಗಣೇಶ ಕ್ಯಾಂಪ್ ವಾಚರ್ ಆಗಿದ್ದರು. ಕಾವೇರಿ ವನ್ಯಜೀವಿಧಾಮದ, ಕೌದಳ್ಳಿ ವಲಯ ವ್ಯಾಪ್ತಿಯ ಉಗನಿಯ ಎಪಿ ಕ್ಯಾಂಪ್ ನಲ್ಲಿದ್ದ ಗಣೇಶ್ ಅವರು ನೀರು ತರಲೆಂದು ಕ್ಯಾಂಪ್ ನಿಂದ ಹೊರ ಹೋಗಿದ್ದರು. ಈ ವೇಳೆ ದಿಢೀರ್ ಆಗಿ ಬಂದ ಕಾಡಾನೆ ಅವರ ಮೇಲೆ ದಾಳಿ ನಡೆಸಿದೆ. ಏಕಾಏಕಿ ನಡೆದ ದಾಳಿಗೆ ಹೆದರಿದ ಗಣೇಶ್ ಅವರು ಜೋರಾಗಿ ಚೀರಿ ಸಮೀಪದಲ್ಲಿಯೇ ಇದ್ದ ಸಿಬ್ಬಂದಿಗಳನ್ನು ಕೂಗಿದ್ದಾರೆ.

ತಕ್ಷಣ ವಲಯ ಅರಣ್ಯಾಧಿಕಾರಿ ಲೋಕೇಶ್ ಚೌಹಾಣ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಅಷ್ಟರಲ್ಲೇ ಕಾಡಾನೆ ಅಲ್ಲಿಂದ ಪರಾರಿಯಾಗಿದ್ದು, ಗಾಯಗೊಂಡಿದ್ದ ಗಣೇಶ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ, ಅರಣ್ಯ ಇಲಾಖೆಯ ಜೀಪ್ ಮೂಲಕ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ.

Chaitra Kulal

Recent Posts

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

10 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

22 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

34 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

37 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

52 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

1 hour ago