ಮಹದೇಶ್ವರಬೆಟ್ಟದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

ಚಾಮರಾಜನಗರ:  ಕರ್ನಾಟಕ ತಮಿಳುನಾಡಿ ಗಡಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಗಳಲ್ಲಿ, 25 ದಿನಗಳ ಅವಧಿಯಲ್ಲಿ ದಾಖಲೆಯ ರೂ 3.13 ಕೋಟಿ ಕಾಣಿಕೆ ಸಂಗ್ರಹವಾಗಿದೆ.

ದೇವಾಲಯದ ಇತಿಹಾಸದಲ್ಲಿ 30 ದಿನಗಳ ಒಳಗಾಗಿ ಸಂಗ್ರಹವಾಗಿರುವ ಗರಿಷ್ಠ ಹುಂಡಿ ಕಾಣಿಕೆ ಮೊತ್ತ ಇದಾಗಿದೆ  ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ರೂ 2.90 ಕೋಟಿ ಸಂಗ್ರಹವಾಗಿದ್ದು ಈವರೆಗಿನ ದಾಖಲೆಯಾಗಿತ್ತು. ಮಂಗಳವಾರ ಬೆಳಿಗ್ಗೆಯಿಂದ ತಡರಾತ್ರಿವರೆಗೂ 10.30ರವರೆಗೂ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು. ಮಾರ್ಚ್ 1ರಿಂದ 25ರವರೆಗಿನ ಅವಧಿಗೆ ಸಂಗ್ರಹವಾಗಿರುವ ಕಾಣಿಕೆಯ ಹಣವನ್ನು ಎಣಿಸಲಾಯಿತು.

ನೋಟುಗಳ ರೂಪದಲ್ಲಿ ರೂ. 2,98,41,802 ಮತ್ತು ನಾಣ್ಯಗಳ ರೂಪದಲ್ಲಿ ರೂ. 14,59,129 ಸೇರಿದಂತೆ ಒಟ್ಟು ರೂ. 3,13,00,931 ಹಣ ಸಂಗ್ರಹವಾಗಿದೆ. ಇದರೊಂದಿಗೆ 47 ಗ್ರಾಂ ಚಿನ್ನ,  2.300 ಕೆಜಿ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ಹುಂಡಿಗಳಿಗೆ ಹಾಕಿದ್ದಾರೆ. ಮಾರ್ಚ್ 7ರಿಂದ 11ರವರೆಗೆ ಬೆಟ್ಟದಲ್ಲಿ ಮಹಾಶಿವರಾತ್ರಿ ನಡೆದಿತ್ತು. ವಾರದ ಅವಧಿಯಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದರು. ಹೀಗಾಗಿ ಹೆಚ್ಚು ಆದಾಯ ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ  ಚಂದ್ರಶೇಖರ, ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರ ನಾಗೇಶ್, ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ಶಾಖೆಯ ಶ್ವೇತಾ, ಪ್ರಾಧಿಕಾರದ ಸಿಬ್ಬಂದಿ ಎಣಿಕೆಯಲ್ಲಿ ಭಾಗವಹಿಸಿದ್ದರು.

Ashika S

Recent Posts

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

7 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

26 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

28 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

43 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

59 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

1 hour ago