ಲಂಚ ಪಡೆಯುತ್ತಿದ್ದ ಸರ್ಕಾರಿ ವೈದ್ಯೆ ರೇಣುಕಾದೇವಿ ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ

ಚಾಮರಾಜನಗರ : ಜಿಲ್ಲೆಯ ಸಂತೇಮರಳ್ಳಿ ತಾಲೂಕಿನ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಇಂತಿಷ್ಟು ಹಣವನ್ನ ನಿಗದಿಗೊಳಿಸಿ ಲಂಚದ ಸುಳಿಯಲ್ಲಿ ಸಿಲುಕಿದ್ದ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ರೇಣುಕಾದೇವಿ ಅವರನ್ನು ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಲಂಚದ ಬಲೆಯಲ್ಲಿ ಸಿಲುಕಿ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯೆ ರೇಣುಕಾದೇವಿ ಇತ್ತೀಚಿಗೆ ಬಾರಿ ಸುದ್ದಿಯಲ್ಲಿದ್ದರು.  ಲಂಚದ ಕೂಪದಲ್ಲಿ ಮಿಂದೆದ್ದಿದ್ದ ವೈದ್ಯೆಯ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳದೇ ಏಕಾಏಕಿ ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲವರಿಗೆ ಮೂರು ಸಾವಿರ, ಶಸ್ತ್ರ ಚಿಕಿತ್ಸೆಗೆ 20 ರಿಂದ 25 ಸಾವಿರ, ಸಿಜೆರಿಯನ್ ಗೆ 30 ಸಾವಿರ ಹಣ ಪಿಕ್ಸ್ ಮಾಡಿದ್ದ ಆರೋಪ ಈ ವೈದ್ಯೆಯ ಮೇಲಿತ್ತು, ಇದಕ್ಕೆ ಪುಷ್ಟಿ ನೀಡುವಂತೆ ಆಶಾ ಕಾರ್ಯಕರ್ತೆಯರ ಬಳಿ ಹಣ ವಸೂಲಿ ಮಾಡಲಾಗ್ತಿದ್ದ ವಿಡಿಯೋ ಸಹ ಲಭ್ಯವಾಗಿತ್ತು. ಇಷ್ಟೆಲ್ಲಾ ಸಾಕ್ಷ್ಯದಾರ ಇದ್ರು ಸಹ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಇವರ ಮೇಲೆ ಮೃದು ಧೋರಣೆ ತಂದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Chaitra Kulal

Recent Posts

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

52 seconds ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

6 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

14 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

31 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

32 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

43 mins ago