ಸಂತೇಮರಹಳ್ಳಿ: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಪಲ್ಟಿಯಾದ ಕಾರಣ ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮೈಸೂರಿನ ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಗೂರು ಕ್ರಾಸ್ ಬಳಿ ಘಟನೆ ನಡೆದಿದೆ.
ಖಾಸಗಿ ಬಸ್ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಉದಯರಂಗ ಎಂಬ ಬಸ್ ಮೂಗೂರು ಕ್ರಾಸ್ ಬಳಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಈ ಪೈಕಿ 30 ರಿಂದ 35 ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಪೊಲೀಸರು ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನಾ ಸ್ಥಳವು ಮೈಸೂರು ಜಿಲ್ಲೆಯ ತಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ್ದು ಚಾಮರಾಜನಗರ ಪೊಲೀಸರು ಮೈಸೂರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.