News Karnataka Kannada
Saturday, April 13 2024
Cricket
ಚಾಮರಾಜನಗರ

ಶಿವರಾತ್ರಿ ಜಾತ್ರೆ: ಮಾದಪ್ಪನ ಬೆಟ್ಟದಲ್ಲಿ 4 ಲಕ್ಷ ಲಾಡು ರೆಡಿ

ಶಿವನ ಭಕ್ತರ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾಶಿವರಾತ್ರಿ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಶಿವರಾತ್ರಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಪ್ರಾಧಿಕಾರ ಸಕಲ ಸಿದ್ಧತೆ ಕೈಗೊಂಡಿದೆ.
Photo Credit : News Kannada

ಚಾಮರಾಜನಗರ: ಶಿವನ ಭಕ್ತರ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾಶಿವರಾತ್ರಿ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಶಿವರಾತ್ರಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಪ್ರಾಧಿಕಾರ ಸಕಲ ಸಿದ್ಧತೆ ಕೈಗೊಂಡಿದೆ.

ಈಗಾಗಲೇ ಕನಕಪುರ, ಬೆಂಗಳೂರು, ರಾಮನಗರ, ಚನ್ನಪಟ್ಟಣ ಕಡೆಯಿಂದ ಕಾವೇರಿ ಸಂಗಮವನ್ನು ದಾಟಿ ಲಕ್ಷಾಂತರ ಮಂದಿ ಭಕ್ತರು ಬೆಟ್ಟಕ್ಕೆ ಬಂದಿದ್ದು ಚಾಮರಾಜನಗರ, ಮಂಡ್ಯ, ಮೈಸೂರು ಭಾಗದಿಂದಲೂ ಭಕ್ತಸಾಗರವೇ ಸೇರಿದೆ‌.‌ ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೇ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು ಎತ್ತ ನೋಡಿದರೂ ಮಾದಪ್ಪನ ಜಯಘೋಷಗಳು ಮಾರ್ದನಿಸುತ್ತಿದೆ.

4 ಲಕ್ಷ ಲಡ್ಡು ರೆಡಿ: ತಿರುಪತಿಯಂತೇ ಮಲೆ ಮಹದೇಶ್ವರನ ಲಾಡು ಪ್ರಸಾದಕ್ಕೂ ಬೇಡಿಕೆ ಇರುವ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರವು ಈಗಾಗಲೇ 4 ಲಕ್ಷ ಲಾಡುಗಳನ್ನು ತಯಾರಿಸಿದ್ದು ಲಾಡು ಪ್ರಸಾದ ಮಾರಾಟವಾಗುತ್ತಿದ್ದಂತೆ ಪ್ರಸಾದ ತಯಾರಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ, ಲಾಡು ಪ್ರಸಾದ ಮಾರಾಟ ಈ ಬಾರಿ 5 ಲಕ್ಷ ಮೀರುವ ನಿರೀಕ್ಷೆ ಇದೆ.

ಮಡಕೆ ನೀರು – ಮಾತೃ ಕುಟೀರ: ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆ ಪ್ರಾಧಿಕಾರದ ಕಾರ್ಯದರ್ಶಿ ರಘು ಮೊದಲ ಬಾರಿಗೆ ಕ್ಷೇತ್ರದ ಅಲ್ಲಲ್ಲಿ ಮಡಕೆಗಳನ್ನು ಇರಿಸಿದ್ದು ಭಕ್ತರು ಈ ಬಾರಿ ಕುಡಿಯುವ ನೀರಿನ ಟ್ಯಾಂಕ್ ಜೊತೆಗೆ ಮಡಕೆ ನೀರನ್ನು ಸೇವಿಸಬಹುದಾಗಿದೆ.

ತಾಯಂದಿರು ಕೂಡ ಸಾವಿರಾರು ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ತೊಂದರೆಯಾಗದಂತೆ ತೆಂಗಿನ ಗರಿಗಳನ್ನು ಬಳಸಿಕೊಂಡು ಹಾಲುನಿಸುವ ಕೇಂದ್ರ ತೆರೆದಿದ್ದು ಮಾತೃ ಕುಟೀರ ಎಂದು ಹೆಸರಿಡಲಾಗಿದೆ ಇದು ಭಕ್ತರ ಮೆಚ್ಚುಗೆಗೆ ಪಾತ್ರವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು