News Karnataka Kannada
Monday, April 29 2024
ಚಾಮರಾಜನಗರ

ವನ್ಯಜೀವಿ ಸಂರಕ್ಷಣೆಗೆ ಮೂರು ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನ: ಖಂಡ್ರೆ

ವನ್ಯಜೀವಿ ಸಂಘರ್ಷ, ಕಳ್ಳಬೇಟೆ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
Photo Credit : News Kannada

ಚಾಮರಾಜನಗರ: ವನ್ಯಜೀವಿ ಸಂಘರ್ಷ, ಕಳ್ಳಬೇಟೆ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಸಫಾರಿ ಸ್ವಾಗತ ಕೇಂದ್ರದ ಬಳಿ ನಿರ್ಮಿಸಲಾಗಿದ್ದ ಸಭಾಂಗಣದಲ್ಲಿ ಕೇರಳದ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ಅವರೊಂದಿಗೆ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ ಪ್ರಥಮ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಇದು ಕೇಂದ್ರ ಸರ್ಕಾರದ ಆದೇಶದ ಮೇಲೆ ನಡೆಯುತ್ತಿರುವ ಸಭೆಯಲ್ಲ ಬದಲಾಗಿ, ದಕ್ಷಿಣದ ಮೂರು ರಾಜ್ಯಗಳ ಕಳಕಳಿ ಮತ್ತು ಸ್ವಯಂ ಪ್ರಯತ್ನದ ಫಲವಾದ ಸಭೆಯಾಗಿದೆ ಎಂದು ತಿಳಿಸಿದರು.

ವನ್ಯ ಜೀವಿಗಳು ಸ್ವಚ್ಛಂದವಾಗಿ ಒಂದು ಕಾಡಿನಿಂದ ಮತ್ತೊಂದಕ್ಕೆ ಸಂಚರಿಸುತ್ತವೆ. ಹಲವಾರು ಶತಮಾನಗಳಿಂದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ನಡುವೆ ಆನೆಗಳು ಮುಕ್ತವಾಗಿ ಓಡಾಡುತ್ತಿದ್ದು, ಯಾವುದೇ ವನ್ಯ ಜೀವಿಗೆ ರಾಜ್ಯದ ಗಡಿಯ ಮಿತಿ ಇರುವುದಿಲ್ಲ. ಆನೆ ಕಾರಿಡಾರ್ ಇದೆ. ಹುಲಿಗಳು ಕೂಡ ಒಂದು ಕಾಡಿನಿಂದ ಮತ್ತೊಂದಕ್ಕೆ ಹೋಗುತ್ತವೆ. ಈ ವನ್ಯಜೀವಿಗಳಿಂದ ಯಾವುದೇ ರಾಜ್ಯದಲ್ಲಿ ಅಮೂಲ್ಯ ಜೀವ ಅಥವಾ ಬೆಳೆ ಹಾನಿ ತಗ್ಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದ್ದು ಶೀಘ್ರದಲ್ಲೇ ಇದಕ್ಕೆ ಒಂದು ಮೂರ್ತ ರೂಪ ನೀಡಲಾಗುವುದು ಎಂದರು.
ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಅರಣ್ಯ ಸಂರಕ್ಷಣೆ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಒತ್ತು ನೀಡಿ, ಕಾಯಿದೆಗಳನ್ನು ಜಾರಿಗೆ ತಂದರು. ನಂತರದ ಎಲ್ಲ ಸರ್ಕಾರಗಳೂ ವನ ಮತ್ತು ವನ್ಯಜೀವಿ ಸಂಪತ್ತಿನ ರಕ್ಷಣೆಗೆ ಒತ್ತು ನೀಡಿದ ಫಲವಾಗಿ ಇಂದು ಅರಣ್ಯ ಸಂರಕ್ಷಣೆಯೂ ಆಗಿದೆ, ವನ್ಯಜೀವಿಗಳ ಸಂತತಿಯಲ್ಲೂ ಹೆಚ್ಚಳವಾಗಿದೆ ಎಂದರು.

ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣದ ಈ ಮೂರೂ ರಾಜ್ಯಗಳಲ್ಲಿರುವ ಉತ್ತಮ ರೂಢಿಗಳನ್ನು ಅಳವಡಿಸಿಕೊಂಡು ಪ್ರಕೃತಿ ಪರಿಸರ ಉಳಿಸಲು ಪರಸ್ಪರ ಸಹಯೋಗ ನೀಡಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.
ಅರಣ್ಯ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳನ್ನು ಕರ್ನಾಟಕ, ಕೇರಳ ಮತ್ತು ತಮಿಳುನಾಡು ಮೂರೂ ರಾಜ್ಯಗಳು ಉತ್ತಮವಾಗಿ ಮಾಡುತ್ತಿವೆ. ಹೀಗಾಗಿಯೇ ಈ ಮೂರೂ ರಾಜ್ಯಗಳಲ್ಲಿ ವನ್ಯ ಜೀವಿಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಪ್ರಯತ್ನಗಳನ್ನು ಮುಂದುವರಿಸುವುದು ನಿರ್ಣಾಯಕ ಎಂದು ಈಶ್ವರ ಖಂಡ್ರೆ ಒತ್ತಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು