ಹನೂರಿನಲ್ಲಿ ಬಸ್ ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ಸಮರ್ಪಕ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳು ತೊಂದರೆಯಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.

ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಾಹದೇಶ್ವರ ಬೆಟ್ಟಕ್ಕೆ ನೂರಾರು ಹೆಚ್ಚುವರಿ ಬಸ್ ಗಳನ್ನು ಬಿಡಲಾಗಿತ್ತು. ಆದರೆ ಈ ವಿಶೇಷ ಬಸ್ ಗಳಲ್ಲಿ ಪಾಸ್ ಇರುವ ಮಕ್ಕಳನ್ನು ಕರೆದುಕೊಂಡು ಹೋಗದ ಹಿನ್ನೆಲೆ ಸಾವಿರಾರು ವಿದ್ಯಾರ್ಥಿಗಳು ಹನೂರು ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಜಮಾಯಿಸಿ ಎಲ್ಲ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ವಿದ್ಯಾರ್ಥಿಗಳು ವಿಶೇಷ ಜಾತ್ರಾ ಹಬ್ಬ ಹರಿದಿನ ಸಂದರ್ಭದಲ್ಲಿ ನಮಗೆ ಶಾಲಾ ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಲೇಜಿನಲ್ಲಿ 10 ನಿಮಿಷ ತಡವಾಗಿ ಹೋದರೂ ಸಹ ನಮ್ಮನ್ನು ಕಾಲೇಜಿಗೆ ಸೇರಿಸಿಕೊಳ್ಳುವುದಿಲ್ಲ, ಇದರಿಂದ ನಮಗೆ ತೀವ್ರ ಸಮಸ್ಯೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುರಟಿ ಹೊಸೂರು ಗ್ರಾಮದ ನವ್ಯಶ್ರೀ ಮಾತನಾಡಿ ಕೆ ಎಸ್ ಆರ್ ಟಿ ಸಿ ಬಸ್ ನ ನಿರ್ವಾಹಕರು ಹಾಗೂ ಚಾಲಕರು ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ನಾವು ಮೊದಲೇ ಹಣ ಪಾವತಿ ಮಾಡಿ ಬಸ್ ಪಾಸ್ ಪಡೆದಿದ್ದರೂ ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ. ಸಾರಿಗೆ ಇಲಾಖೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸದೆ ಇರುವುದರಿಂದ ನಮ್ಮ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Gayathri SG

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

2 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

8 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

20 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

31 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

51 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago