News Karnataka Kannada
Sunday, April 28 2024
ಚಾಮರಾಜನಗರ

ಕಾಂಗ್ರೆಸ್ ಸಿಇಸಿ ಸಭೆಗೂ ಮುನ್ನ ಸುನೀಲ್ ಬೋಸ್ ನಾಮಿನೇಷನ್ ಡೇಟ್ ಫಿಕ್ಸ್ ..

ಕಾಂಗ್ರೆಸ್ ಸಿಇಸಿ ಸಭೆಗೂ ಮುನ್ನವೇ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರ ಸಲ್ಲಿಸುವ ದಿನಾಂಕ ಫಿಕ್ಸ್ ಆಗಿದ್ದು ಏ.3 ರಂದು ಸುನೀಲ್ ಬೋಸ್ ನಾಮಪತ್ರ ಸಲ್ಲಿಸಲಿದ್ದಾರೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರವಾಸಪಟ್ಟಿ ಹೊರಡಿಸಿದೆ.
Photo Credit : NewsKarnataka

ಚಾಮರಾಜನಗರ: ಕಾಂಗ್ರೆಸ್ ಸಿಇಸಿ ಸಭೆಗೂ ಮುನ್ನವೇ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರ ಸಲ್ಲಿಸುವ ದಿನಾಂಕ ಫಿಕ್ಸ್ ಆಗಿದ್ದು ಏ.3 ರಂದು ಸುನೀಲ್ ಬೋಸ್ ನಾಮಪತ್ರ ಸಲ್ಲಿಸಲಿದ್ದಾರೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರವಾಸಪಟ್ಟಿ ಹೊರಡಿಸಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ‌ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಅನುಮತಿಯೊಂದಿಗೆ ಪ್ರವಾಸಪಟ್ಟಿ ಹೊರಡಿಸಿದ್ದು ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೆಸರಿಸಲಾಗಿದೆ. ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಸಿಇಸಿ ಸಭೆ ನಡೆಯಲಿದ್ದು ಬಳಿಕ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ತಿಳಿದುಬಂದಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಮೈಸೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಏ.1 ಹಾಗೂ 2 ರಂದು ಕಾರ್ಯಕರ್ತರ ಸಭೆ ನಡೆಸಲಿದ್ದು ಏ.3 ರ ಬೆಳಗ್ಗೆ 11 ಕ್ಕೆ ಸುನಿಲ್ ಬೋಸ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ. ತೀವ್ರ ಕಗ್ಗಂಟಾಗಿ ಉಳಿದಿದ್ದ ಕಾಂಗ್ರೆಸ್ ನ ಟಿಕೆಟ್ ಕೊನೆಗೂ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಮಹಾದೇವಪ್ಪ ಯಶ ಕಂಡಿದ್ದಾರೆ. ಇನ್ನು, ಚಾಮರಾಜನಗರದ ಕೈ ಶಾಸಕರು ಈಗಾಗಲೇ ಮುಖಂಡರ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ರಣತಂತ್ರ ಹೆಣೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು