News Karnataka Kannada
Saturday, April 27 2024
ಚಾಮರಾಜನಗರ

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಹೆಸರು ಅಂತಿಮ

ಕಾಂಗ್ರೆಸ್ ಸಿಇಸಿ ಸಭೆಗೂ ಮುನ್ನವೇ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರ ಸಲ್ಲಿಸುವ ದಿನಾಂಕ ಫಿಕ್ಸ್ ಆಗಿದ್ದು ಏ.3 ರಂದು ಸುನೀಲ್ ಬೋಸ್ ನಾಮಪತ್ರ ಸಲ್ಲಿಸಲಿದ್ದಾರೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರವಾಸಪಟ್ಟಿ ಹೊರಡಿಸಿದೆ.
Photo Credit : NewsKarnataka

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಎಚ್.ಸಿ.ಮಹದೇವಪ್ಪ ಪುತ್ರ ಸುನಿಲ್ ಬೋಸ್ ಗೆ ಟಿಕೆಟ್ ಖಾತ್ರಿಯಾಗಿದೆ, ರಾಜ್ಯ ರಾಜಕಾರಣದಲ್ಲಿ ತಂದೆ ಮಹದೇವಪ್ಪ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ರೆ ಇತ್ತ ಮಗ ಲೋಕಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಕೊನೆಗೂ ಸುನಿಲ್ ಬೋಸ್ ಅವರನ್ನ ಅಂತಿಮಗೊಳಿಸಲಾಗಿದೆ. 1991 ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ದಿಸಿದ್ದ ಎಚ್.ಸಿ.ಮಹದೇವಪ್ಪ ಅವರ ಬಳಿಕ ಮಗ ಸುನಿಲ್ ಬೋಸ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲವುಂಟಾಗಿದ್ದ ಚಾಮರಾಜನಗರ ಜಿಲ್ಲಾ ಲೋಕಸಭಾ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಹೆಸರು ಅಂತಿಮವಾಗುತ್ತಿದ್ದಂತೆ ಪ್ರಚಾರದ ಪ್ಲಾನ್ ಸಿದ್ಧವಾಗತೊಡಗಿದೆ. ಮಾರ್ಚ್ 28 ರಿಂದ ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬಿರುಸಿನ ಪ್ರಚಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು