ಸಿಇಸಿ ಸಭೆಗೂ ಮುನ್ನ ಸುನೀಲ್ ಬೋಸ್ ನಾಮಿನೇಷನ್ ಡೇಟ್ ಫಿಕ್ಸ್

ಚಾಮರಾಜನಗರ: ಕಾಂಗ್ರೆಸ್ ಸಿಇಸಿ ಸಭೆಗೂ ಮುನ್ನವೇ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರ ಸಲ್ಲಿಸುವ ದಿನಾಂಕ ಫಿಕ್ಸ್ ಆಗಿದ್ದು ಏ.3 ರಂದು ಸುನೀಲ್ ಬೋಸ್ ನಾಮಪತ್ರ ಸಲ್ಲಿಸಲಿದ್ದಾರೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರವಾಸಪಟ್ಟಿ ಹೊರಡಿಸಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ‌ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಅನುಮತಿಯೊಂದಿಗೆ ಪ್ರವಾಸಪಟ್ಟಿ ಹೊರಡಿಸಿದ್ದು ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೆಸರಿಸಲಾಗಿದೆ.

ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಸಿಇಸಿ ಸಭೆ ನಡೆಯಲಿದ್ದು ಬಳಿಕ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಮೈಸೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಏ.1 ಹಾಗೂ 2 ರಂದು ಕಾರ್ಯಕರ್ತರ ಸಭೆ ನಡೆಸಲಿದ್ದು ಏ.3 ರ ಬೆಳಗ್ಗೆ 11 ಕ್ಕೆ ಸುನಿಲ್ ಬೋಸ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ.

ತೀವ್ರ ಕಗ್ಗಂಟಾಗಿ ಉಳಿದಿದ್ದ ಕಾಂಗ್ರೆಸ್ ನ ಟಿಕೆಟ್ ಕೊನೆಗೂ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಮಹಾದೇವಪ್ಪ ಯಶ ಕಂಡಿದ್ದಾರೆ. ಇನ್ನು, ಚಾಮರಾಜನಗರದ ಕೈ ಶಾಸಕರು ಈಗಾಗಲೇ ಮುಖಂಡರ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ರಣತಂತ್ರ ಹೆಣೆದಿದ್ದಾರೆ.

Ashika S

Recent Posts

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

3 mins ago

ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…

13 mins ago

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

22 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

23 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

35 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

1 hour ago