News Karnataka Kannada
Friday, May 03 2024
ಚಾಮರಾಜನಗರ

ಪಕ್ಷದ ವರಿಷ್ಠರ ಬಗ್ಗೆ ಯಾವುದೇ ಮುನಿಸಿಲ್ಲ : ಸಚಿವ ಮುನಿಯಪ್ಪ

ಕಾಂಗ್ರೆಸ್ ನನಗೆ ಸಾಕಷ್ಟು ಉನ್ನತ ಹುದ್ದೆಗಳನ್ನು ನನಗೆ ನೀಡಿದ್ದು, ಯಾವುದೋ ಒಂದು ಚುನಾವಣೆಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸು ತೋರಿಸಲು ಸಾಧ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.
Photo Credit : NewsKarnataka

ಚಾಮರಾಜನಗರ: ಕಾಂಗ್ರೆಸ್ ನನಗೆ ಸಾಕಷ್ಟು ಉನ್ನತ ಹುದ್ದೆಗಳನ್ನು ನನಗೆ ನೀಡಿದ್ದು, ಯಾವುದೋ ಒಂದು ಚುನಾವಣೆಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸು ತೋರಿಸಲು ಸಾಧ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಚಾಮರಾಜನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಾನು ಮತ್ತು ನನ್ನ ಮಗ ಇಬ್ಬರೂ ಉಪಸ್ಥಿತರಿದ್ದೆವು. ಕಾಂಗ್ರೆಸ್ ಹೈಕಮಾಂಡ್ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವಂತೆ ಸೂಚನೆ ನೀಡಿದೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ.

ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದರು. ರಾಜ್ಯಕ್ಕೆ ಬರಪರಿಹಾರ ಹಾಗೂ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ಹಾದಿಯಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಆದರೆ ಭಾರತ್ ರೈಸ್‌ಗೆ ಕಡಿಮೆ ದರದಲ್ಲಿ ಅಕ್ಕಿಯನ್ನು ನೀಡಿದರು ಎಂದು ಟೀಕಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಸಾಕಷ್ಟು ಅನುದಾನ ಮೀಸಲಿಟ್ಟಿದೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಜನವಿರೋಧಿ ಕೇಂದ್ರ ಸರ್ಕಾರವನ್ನು ಕಂಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ.

ಪಟ್ಟಭದ್ರ ಹಿತಾಸಕ್ತಿಗಳು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಸಂವಿಧಾನ ಉಳಿಯಲಾರದು ಎಂಬ ಆತಂಕ ಕಾಡುತ್ತಿದೆ. ಮಹಾತ್ಮ ಗಾಂಧೀಜಿ ಅವರ ಸಿದ್ಧಾಂತ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರು ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು