News Karnataka Kannada
Wednesday, April 17 2024
Cricket
ಚಾಮರಾಜನಗರ

ಗುಂಡ್ಲುಪೇಟೆ: ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಪಲ್ಟಿ ಚಾಲಕ ಸಾವು

ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಮಡಹಳ್ಳಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
Photo Credit : News Kannada

ಗುಂಡ್ಲುಪೇಟೆ: ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಮಡಹಳ್ಳಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.

ಮಡಹಳ್ಳಿ ಗ್ರಾಮದ ಮಾದಪ್ಪ(53) ಮೃತ ವ್ಯಕ್ತಿಯಾಗಿದ್ದು, ಈತ ಮಡಹಳ್ಳಿಯ ಚೇತನ ಎಂಬುವವರ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುತ್ತಿದ್ದ ವೇಳೆ ತಿರುವಿನಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರಾಕ್ಟರ್ ಕೆಳಗೆ ಚಾಲಕ ಸಿಲುಕಿ ಹಾಕಿಕೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಮಾಹಿತಿ ಅರಿತ ಸುತ್ತಮುತ್ತಲ ಜಮೀನು ಮಾಲೀಕರು ಹಾಗೂ ರೈತರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಚಾಲಕನನ್ನು ಟ್ರ್ಯಾಕ್ಟರ್ ನಿಂದ ಹೊರ ತೆಗೆದರು ಕೂಡ ಯಾವುದೇ ಪ್ರಯೋಜನವಾಗಲಿಲ್ಲ.

ಘಟನೆ ಅರಿತ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಚಾಲಕನ ಮೃತ ದೇಹವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಂತರ ಟ್ರಾಕ್ಟರ್ ಅನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು