ಚಾಮರಾಜನಗರ

ಅರಿಶಿನ ಫಸಲಿನ ಮದ್ಯೆ ಗಾಂಜಾ ಬೆಳೆದಿದ್ದ ಇಬ್ಬರ ಬಂಧನ

ಚಾಮರಾಜನಗರ: ಅರಿಶಿನ ಫಸಲಿನ ಮದ್ಯೆ ಗಾಂಜಾ ಬೆಳೆದಿದ್ದ ಇಬ್ಬರನ್ನ ಪೊಲೀಸರು ಬಂಧಿಸಿ ಬರೋಬ್ಬರಿ 34 ಕೆಜಿಯಷ್ಟು ಹಸಿ ಗಾಂಜಾವನ್ನು ಹನೂರು ಪೋಲಿಸರು ವಶಕ್ಕೆ ಪಡೆದಿರುವ ಘಟನೆ ಆನೆಗುಂದಿ ಗ್ರಾಮದಲ್ಲಿ ನೆಡೆದಿದೆ.

ತಾಲ್ಲೂಕಿನ ಪಿಜಿಪಾಳ್ಯ ಸಮೀಪದ ಆನೆಗುಂದಿ ಗ್ರಾಮದ ಎಸ್.ಬಾಲು(65) ಹಾಗೂ ಇವರ ಪುತ್ರ ಮಹಾಲಿಂಗ(35) ಬಂಧಿತ ಆರೋಪಿಗಳಾಗಿದ್ದಾರೆ.‌

ಪಿಜಿ ಪಾಳ್ಯ ವ್ಯಾಪ್ತಿಯ ಸರ್ವೆ ನಂಬರ್ 202 ರ ಜಮೀನೊಂದರಲ್ಲಿ ಅರಿಶಿನದ ಫಸಲಿನ ಮದ್ಯೆ ಅಕ್ರಮವಾಗಿ ಗಾಂಜಾ ಬೆಳೆದ ಖಚಿತ ಮಾಹಿತಿ ಮೇರೆಗೆ ಡಿ ವೈಎಸ್ ಪಿ ಸೋಮೇಗೌಡ ಹನೂರು ಇನ್ಸ್ಪೆಕ್ಟರ್ ಶಶಿಕುಮಾರ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿತರಿಂದ ಬರೋಬ್ಬರಿ 34 ಕೆಜಿಯಷ್ಟು ಹಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Gayathri SG

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

7 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

17 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

18 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

41 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

51 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

56 mins ago