News Karnataka Kannada
Tuesday, May 07 2024
ಚಾಮರಾಜನಗರ

ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ ದಾಖಲೆಯಿಲ್ಲದ ಚಿನ್ನಾಭರಣ ವಶ

ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ  ದಾಖಲೆಯಿಲ್ಲದೆ ಸಾಗಾಣಿಕೆ ಮಾಡುತ್ತಿದ್ದ 1,57,87,000 ರೂ. ಮೌಲ್ಯದ 2 ಕೆ.ಜಿ. 170 ಗ್ರಾಂ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Photo Credit : NewsKarnataka

ಚಾಮರಾಜನಗರ: ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ  ದಾಖಲೆಯಿಲ್ಲದೆ ಸಾಗಾಣಿಕೆ ಮಾಡುತ್ತಿದ್ದ 1,57,87,000 ರೂ. ಮೌಲ್ಯದ 2 ಕೆ.ಜಿ. 170 ಗ್ರಾಂ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಚಾಮರಾಜನಗರ ಜಿಲ್ಲೆಯ  ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ  ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ಬರುತ್ತಿದ್ದ ಕೆಎ-17 ಜಡ್-9447 ಸಂಖ್ಯೆಯ ಹುಂಡೈ ವೆನ್ಯೂ (ಕಾರು) ವಾಹನದಲ್ಲಿ ದಾಖಲೆಗಳಿಲ್ಲದೇ ಸಾಗಾಣಿಕೆ ಮಾಡುತ್ತಿದ್ದ ಕಾರ್ತಿಕ್ ಮತ್ತು ಚಿರಾಂತ್ ಎಂಬುವವರಿಂದ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿ ಎಂ. ರವಿಶಂಕರ್ ಅವರು ಜಪ್ತಿ ಮಾಡಿದ್ದಾರೆ.

ಚಿನ್ನಾಭರಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ, ಸಮಂಜಸ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಚಿನ್ನವನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದಾಯ ತೆರಿಗೆ ಇಲಾಖೆಯ ಅನ್ವೇಷಣೆ ವಿಭಾಗದ ಸಹಾಯಕ ನಿರ್ದೇಶಕರಾದ ಆರ್. ರಂಗನಾಥ್, ಆದಾಯ ತೆರಿಗೆ ಇಲಾಖೆ ಅಧಿಕಾರಿ  ಜಿ. ರಘು, ಜಿ. ದಿವಾಕರ್ ಅವರಿಂದ ತನಿಖೆ ಹಾಗೂ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ನಾಗ್  ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು