News Karnataka Kannada
Saturday, May 04 2024
ಚಾಮರಾಜನಗರ

ಚಾಮರಾಜನಗರ: ನಾನು ನಂಬಿದವರೇ ಕತ್ತು ಕೊಯ್ದರು- ವಿ.ಸೋಮಣ್ಣ

V Somanna upset with party's Lingayat leaders
Photo Credit : By Author

ಚಾಮರಾಜನಗರ: ನಾನು ನಂಬಿದವರೇ ಕತ್ತು ಕೊಯ್ದರು ಎನ್ನುವ ಮೂಲಕ ಪಕ್ಷದ ಲಿಂಗಾಯತ ಮುಖಂಡರ ವಿರುದ್ಧವೇ ಚಾಮರಾಜನಗರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.

ಚಾಮರಾಜನಗರ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಿದ ಕೃತಜ್ಞತಾ ಸಭೆಯಲ್ಲಿ ಭಾವುಕ ರಾಗಿ ಮಾತನಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ಸಭೆ ಆರಂಭವಾಗುತ್ತಲೇ ಕೆಲವು ಕಾರ್ಯಕರ್ತರು ಒಳೇಟಿನಿಂದಾಗಿ ಸೋಲಾಗಿದೆ ಎಂದು ಗದ್ದಲ ಎಬ್ಬಿಸಿದರು.

ಈ ವೇಳೆ ‌ಮಾತನಾಡಿದ ವಿ ಸೋಮಣ್ಣ ಅವರು ನನ್ನ ಸೋಲಿಗೆ ಯಾರು ಕಾರಣ ಎಂದು ಗೊತ್ತಿದೆ. ನಾನು ಏನೂ ತಿಳಿಯದೆ ಇರುವ ಮುಗ್ದ ಅಲ್ಲ. ಎಂಟು ಹತ್ತು ಜನರ ಪಾಪದ ಕೆಲಸದಿಂದ ಮನೆ ಹಾಳಾಗಿದೆ. ಸ್ವಂತ ತಮ್ಮನನ್ನೇ ಕೊಲೆ ಮಾಡಿದವನು‌ ಇಲ್ಲಿಗೆ ಬಂದಿದ್ದ. ಅಂತಹವರ ಜೊತೆ ಹೋಗುವ ನಮ್ಮವರು ಎಂತಹ ಮುಟ್ಠಾಳರು? ನಾನು ಬಯಸಿ ಇಲ್ಲಿ ಸ್ಪರ್ಧಿಸಿರಲಿಲ್ಲ. ಪಕ್ಷದ ಆದೇಶದ ಮೇರೆಗೆ ಬಂದೆ. ಜಿಲ್ಲೆಯನ್ನು ಅಭಿವೃದ್ಧಿ ಮಾಡುವ ಕನಸು ಕಂಡಿದ್ದೆ. ನಾಲ್ಕು ವರ್ಷಗಳಲ್ಲೇ ಅಭಿವೃದ್ಧಿ ಮಾಡುತ್ತಿದ್ದೆ. ಆದರೆ, ನನ್ನೊಬ್ಬನನ್ಜು ಸೋಲಿಸುವುದಕ್ಕಾಗಿ ಇಡೀ ಜಿಲ್ಲೆಯನ್ನೇ ಹಾಳು ಮಾಡಿದಿರಿ ಎಂದು ಯಾರ ಹೆಸರು ಹೇಳದೆಯೇ ಆಕ್ರೋಶ ಹೊರಹಾಕಿದರು.

ನನ್ನನ್ನು ಸೋಲಿಸಲು ಅಲ್ಲಿಂದಲೇ ನಿರ್ದೇಶನ ಬಂದಿತ್ತು. 45 ವರ್ಷ ರಾಜಕೀಯ ಮಾಡಿದ್ದೇನೆ. ನನಗೆ ಎಲ್ಲವೂ ಗೊತ್ತು. ಯಥಾ ರಾಜ ತಥಾ ಪ್ರಜಾ. ಪ್ರಚಾರ ಸಭೆಯಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ಇದ್ದರು. ಆದರೆ, ಅವರು 10 ನಿಮಿಷ ಇದ್ದರು. 60 ಕಿ.ಮೀ ದೂರವನ್ನು ರಸ್ತೆ ಮಾರ್ಗದಲ್ಲಿ ಹೋಗಬಾರದಿತ್ತೇ ಎಂದು ಯಾರ ಹೆಸರು ಹೇಳದೆಯೇ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ. ಪಕ್ಷದ ಜಿಲ್ಲಾದ್ಯಕ್ಷರೇ, ನಿಮಗೆ ನೈತಿಕತೆ ಇದ್ದರೆ ಅಂತಹವರನ್ನು ಪಕ್ಷದ ಕಚೇರಿಯಿಂದ ದೂರ ಇರಿಸಿ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಜಿ.ನಾರಾಯಣ ಪ್ರಸಾದ್ ಉದ್ದೇಶಿಸಿ ಹೇಳಿದರು.

ಗೆದ್ದರೆ ಸೋಮಣ್ಣ ಇಲ್ಲಿ ಇರುವುದಿಲ್ಲ ಎಂದು ಹೇಳಿದಿರಿ. ಮಗನನ್ನು ಕರೆದುಕೊಂಡು ಬರುತ್ತಾನೆ ಎಂದಿರಿ. ನಾನು ಇಲ್ಲೇ ಇರುತ್ತೇನೆ ಎಂದು ಹೇಳಿದ್ದೆ. 12 ಚುನಾವಣೆ ಎದುರಿಸಿರುವ ನನಗೆ ಯಾವತ್ತು ಇಂತಹ ಮಾನಸಿಕ ಯಾತನೆ ಆಗಿರಲಿಲ್ಲ. ಈ ಸೋಲು ಬಹಳ ಮನಸ್ಸು ನೋವಾಗಿದೆ. ಮಹದೇಶ್ವರನ ಮೇಲಾಣೆ, ನನ್ನ ಮಕ್ಕಳ ಮೇಲಾಣೆ. ಇಲ್ಲಿಗೆ ನಾನಾಗಿಯೇ ಬರಲಿಲ್ಲ. ಪಕ್ಷದ ಆದೇಶದ ಮೇರೆಗೆ ಬಂದೆ ಎಂದು ಮತ್ತೆ ಹೇಳಿದರು.

ನಿಮಗೆ ಸ್ವಾಭಿಮಾನ, ಗೌರವ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ. ಇಲ್ಲಿರುವ ಒಬ್ಬೊಬ್ಬನೂ 10 ಮತಗಳನ್ನು ಹಾಕಿಸಿದ್ದರೆ ಸಾಕಿತ್ತು. ನನಗೆ ಎಂತಹ ಬಳವಳಿ ಕೊಟ್ಟಿರಿ ನೀವು? ಈ ಕೃಪಾಪೋಷಿತ ನಾಟಕದಲ್ಲಿ ಮೋಸ ಮಾಡಿದವರು ನನ್ನ ಸಮುದಾಯದವರು. ಎಲ್ಲಿವರೆಗೆ ಮನೆಹಾಳು ಬಿದ್ದಿರುತ್ತದೋ ಅಲ್ಲಿಯವರೆಗೆ ಉದ್ಧಾರ ಆಗುವುದಿಲ್ಲ ಎಂದು ಕಿಡಿ‌ಕಾರಿದರು.

ಕೆಜೆಪಿ ಸ್ಥಾಪನೆಯಾದಾಗ ಅದಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಹೇಳಿದವನು ಸೋಮಣ್ಣ ಒಬ್ಬನೇ. ಬೇರೆ ಯಾರೂ ಇದನ್ನು ಹೇಳುವ ಧೈರ್ಯ ಮಾಡಲಿಲ್ಲ ಎಂದು ಸೋಮಣ್ಣ ಹೇಳಿದರು. ಅಲ್ಲದೆ, ಭಾಷಣದ ಉದ್ದಕ್ಕೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಅವರ ಹೆಸರು ಹೇಳದೆ ಮನಸ್ಸೋ ಇಚ್ಚೆ ಛೇಡಿಸಿ ಅಸಮಾಧಾನ ಹೊರಹಾಕಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು