ಮಹದೇಶ್ವರ ಬೆಟ್ಟದ ತಪ್ಪಲಿನ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಚಾಮರಾಜನಗರ: ಮೂಲ ಸೌಕರ್ಯ ನೀಡಿ,ಇಲ್ಲ  ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು  ಮಹದೇಶ್ವರ ಬೆಟ್ಟದ ತಪ್ಪಲಿನ ಇಂಡಿಗನತ್ತ ಗ್ರಾಮಸ್ಥರು  ಆಗ್ರಹಿಸಿದ್ದು,  ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ  ಇಂಡಿಗನತ್ತ ಗ್ರಾಮಸ್ಥರು ಇಂದು ಸಭೆ ಸೇರಿ ಮೂಲಭೂತ ಸೌಲಭ್ಯ ನೀಡಿ. ಇಲ್ಲದಿದ್ದರೇ ಮತ ಕೇಳಲು ಬರಬೇಡಿ, ನಾವು ವೋಟು ಹಾಕುವುದಿಲ್ಲ ಎಂಬ ನಿರ್ಧಾರ ಕೈಗೊಂಡಿದ್ದಾರೆ.

ಗ್ರಾಮದ ಮುಖಂಡ ಪುಟ್ಟ ತಂಬಡಿ ಎಂಬವರು ಸಭೆಯಲ್ಲಿ ಮಾತನಾಡಿ, ಸ್ವಾತಂತ್ರ್ಯ ಬಂದು 76  ವರ್ಷಗಳು ಕಳೆದರೂ ನಾಗಮಲೆ, ಇಂಡಿಗನತ್ತ, ತೋಕೆರೆ, ಪಡಸಲನತ್ತ ಮೆಂದಾರೆ, ತೇಕಾಣೆ ಗ್ರಾಮಗಳಲ್ಲಿ ಕನಿಷ್ಠ ಮೂಲಸೌಕರ್ಯವೂ ಇಲ್ಲಂದತಾಗಿದೆ.  ರಸ್ತೆಯಿಲ್ಲ, ವಿದ್ಯುತ್ ಇಲ್ಲ, ಕುಡಿಯುವ ನೀರಿನ ಸೌಲಭ್ಯವಿಲ್ಲ. ಖಾಸಗಿ ಜೀಪ್ ಗಳಲ್ಲಿ ಬರುತ್ತಿದ್ದೆವು. ಈಗ ಅದಕ್ಕೂ ಅರಣ್ಯ ಇಲಾಖೆ ನಿರ್ಬಂಧ ಹೇರಿದ್ದು, ಜೀವನ ನಡೆಸುವುದೇ ದುಸ್ತರವಾಗಿದೆ. ಹಿಂದೆ ಅಧಿಕಾರಿಗಳು, ಸಚಿವರು ನೀಡಿದ್ದ ಭರವಸೆ ಭರವಸೆಯಾಗೇ ಉಳಿದಿದೆ ಎಂದು ಕಿಡಿಕಾರಿದರು.

ಮೂಲಸೌಕರ್ಯವೇ ಮರೀಚಿಕೆಯಾಗಿರುವ ಗ್ರಾಮಕ್ಕೆ ಸರ್ಕಾರ ನೀಡಿರುವ ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ  ಚೀಟಿಗಳನ್ನು ವಾಪಸ್ ಪಡೆದು ನಮಗೆ ಸಾಯಲು ವಿಷ ನೀಡಿ. ಇಲ್ಲದಿದ್ದರೆ ಮೂಲಭೂತ ಸೌಲಭ್ಯ ಕೊಡಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 5000ಕ್ಕೂ ಹೆಚ್ಚು ಜನಸಂಖ್ಯೆ ಇರುವ ಮಾದಪ್ಪನ ಬೆಟ್ಟದ ತಪ್ಪಲಿನ ಗ್ರಾಮಸ್ಥರು ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Ashika S

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

16 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

25 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

38 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

1 hour ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 hour ago