ಚಾಮರಾಜನಗರ

ಉಪಟಳ ನೀಡುವ ಒಂಟಿ ಸಲಗದ ಸೆರೆಗೆ ಪ್ರತಿಭಟನೆ

ಗುಂಡ್ಲುಪೇಟೆ: ಬಂಡೀಪುರ ವ್ಯಾಪ್ತಿ ಸೇರಿದಂತೆ ತಾಲೂಕಿನ ಹಂಗಳ ಸುತ್ತಮುತ್ತಲಿನ ಜಮೀನುಗಳಲ್ಲಿ ಬೆಳೆದಿರುವ ಬೆಳೆ ನಾಶ ಮಾಡುತ್ತಿರುವ ಒಂಟಿ ಸಲಗದ ಸೆರೆಗೆ ಒತ್ತಾಯಿಸಿ ಗ್ರಾಮಸ್ಥರು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಕಳೆದ 15-20 ದಿನಗಳಿಂದ ಬಂಡೀಪುರ ಹುಲಿ ಯೋಜನೆಯ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನ ಹಿರೀಕೆರೆ ಸುತ್ತಮುತ್ತಲು ಸಂಚರಿಸುತ್ತಿರುವ ಒಂಟಿ ಸಲಗ ರೈತರ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನು ನಾಶಪಡಿಸುತ್ತಿದೆ. ಒಂಟಿ ಸಲಗ ದಾಳಿನಡೆಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಸಿಬ್ಬಂದಿ ಸ್ಥಳಕ್ಕೆ ಬರುವ ವೇಳೆಗೆ ಜಮೀನಿಗೆ ಅಳವಡಿಸಿರುವ ಸೋಲಾರ್ ಬೇಲಿ ಕಿತ್ತಿಸೆದು ಕಲ್ಲುಗಳನ್ನು ಮುರಿದು ಒಳಗೆ ಪ್ರವೇಶಿಸಿ ಬೆಳೆಗಳು, ಮರಗಿಡಗಳು ಹಾಗೂ ಕೃಷಿ ಉಪಕರಣಗಳನ್ನು ಧ್ವಂಸ ಮಾಡಿ ದಾಂಧಲೆ ನಡೆಸುತ್ತಿದೆ. ಆದ್ದರಿಂದ ಅರಣ್ಯ ಇಲಾಖೆ ಪುಂಡಾನೆಯನ್ನು ಸೆರೆಹಿಡಿದು ರೇಡಿಯೋ ಕಾಲರ್ ಅಳವಡಿಸಿ ದೂರಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ನಂತರ ಕಚೇರಿಗೆ ತೆರಳಿ ಬಂಡೀಪುರ ಉಪವಿಭಾಗದ ಎಸಿಎಫ್ ನವೀನ್ ಗೋಪಾಲಸ್ವಾಮಿ ಬೆಟ್ಟ ವಲಯದ ಆರ್.ಎಫ್.ಒ ಮಂಜುನಾಥ್ ಅವರನ್ನು ಭೇಟಿ ಮಾಡಿ ಕೂಡಲೇ ಸಲಗವನ್ನು ಅರಣ್ಯದಿಂದ ಹೊರ ಬರುವುದನ್ನು ತಡೆಗಟ್ಟಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತರ ಅಹವಾಲುಗಳನ್ನು ಆಲಿಸಿದ ಅಧಿಕಾರಿಗಳು ಈ ಹಿಂದೆ ಆನೆಯು ದೇವರಹಳ್ಳಿ ಸುತ್ತಮುತ್ತಲೂ ದಾಂಧಲೆ ನಡೆಸುತ್ತಿತ್ತು. ಸದ್ಯ ಅರಣ್ಯ ಇಲಾಖೆಯು ಕಾಡಂಚಿನಲ್ಲಿ ಮುಚ್ಚಿ ಹೋಗಿದ್ದ ಆನೆ ತಡೆ ಕಂದಕದ ಹೂಳೆತ್ತಿಸುತ್ತಿರುವುದರಿಂದ ಹಿರೀಕೆರೆಯತ್ತ ತೆರಳಿದೆ. ಕಂದಕ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದ್ದು ಸದ್ಯದಲ್ಲಿಯೇ ಪೂರ್ಣಗೊಳ್ಳಲಿದೆ. ಅಲ್ಲಿಯವರೆಗೆ ರಾತ್ರಿ ಗಸ್ತು ಹೆಚ್ಚಿಸುವುದಾಗಿ ತಿಳಿಸಿದರು. ನಂತರ ಗ್ರಾಮಸ್ಥರ ಜತೆ ಸ್ಥಳಕ್ಕೆ ತೆರಳಿ ಆನೆ ಹೊರಬರುವ ಪ್ರದೇಶಗಳನ್ನು ಪರಿಶೀಲಿಸಿ ಹೆಚ್ಚಿನ ವಾಹನ ಹಾಗೂ ಸಿಬ್ಬಂದಿ ನಿಯೋಜಿಸಿ ರಾತ್ರಿ ಗಸ್ತು ಹೆಚ್ಚಿಸುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಪ್ಪ, ಚನ್ನಮಲ್ಲಪ್ಪ, ಕಿಟ್ಟ, ಅಭಿಷೇಕ, ಬಸವಣ್ಣ, ಸುರೇಶ್, ಆನಂದ್, ಮಹೇಶ್ ಹಾಜರಿದ್ದರು

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago