News Karnataka Kannada
Monday, May 06 2024
ಚಾಮರಾಜನಗರ

ಇಂಡಿಗನತ್ತದಲ್ಲಿ ಮತ ಬಹಿಷ್ಕಾರ: ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆದು ಮತಗಟ್ಟೆ ಧ್ವಂಸ

ಮತ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್, ತಹಸೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿಯಿಂದಾಗಿ ಮತಗಟ್ಟೆ ಧ್ವಂಸ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ಚಾಮರಾಜನಗರ : ಮತ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್, ತಹಸೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿಯಿಂದಾಗಿ ಮತಗಟ್ಟೆ ಧ್ವಂಸ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಇರುವ ಹಿನ್ನಲೆಯಲ್ಲಿ ಮತ ಬಹಿಷ್ಕಾರಕ್ಕೆ ಮುಂದಾಗಿದ್ದರು.

ಇದನ್ನು ಅರಿತ ತಹಸೀಲ್ದಾರ್ ಗುರುಪ್ರಸಾದ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ರವರು ಮತದಾರರನ್ನು ಮನವೊಲಿಸಲು ಮುಂದಾದಾಗ ಮತ ಚಲಾವಣೆಗೆ ಬಂದ ಮತದಾರರನ್ನು ಕಂಡು ಕೆರಳಿದ ಮತ್ತೊಂದು ಗುಂಪಿನವರು ಮಾತಿನ‌ ಚಕಮಕಿ ನಡೆದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮತಗಟ್ಟೆ ಗೆ ನುಗ್ಗಿದ ಪ್ರತಿಭಟನಾಕಾರರು ವಿದ್ಯುನ್ಮಾನ ಯಂತ್ರ ನಾಶ ಪಡಿಸಿ ಮತಗಟ್ಟೆ ದ್ವಂಸ ಮಾಡಿದರು.

ಈ ವೇಳೆ ಮಹಿಳೆಯರೊಬ್ಬರ ತಲೆಗೆ ಪೆಟ್ಟಾಗಿದೆ ಪ್ರಸ್ತುತ ಇಂಡಿಗನತ್ತ ಗ್ರಾಮದ ಮತಗಟ್ಟೆ ಯಲ್ಲಿ ಮತದಾನ ಸ್ಥಗಿತಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು