ಇಂಡಿಗನತ್ತದಲ್ಲಿ ಮತ ಬಹಿಷ್ಕಾರ: ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆದು ಮತಗಟ್ಟೆ ಧ್ವಂಸ

ಚಾಮರಾಜನಗರ : ಮತ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್, ತಹಸೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿಯಿಂದಾಗಿ ಮತಗಟ್ಟೆ ಧ್ವಂಸ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಇರುವ ಹಿನ್ನಲೆಯಲ್ಲಿ ಮತ ಬಹಿಷ್ಕಾರಕ್ಕೆ ಮುಂದಾಗಿದ್ದರು.

ಇದನ್ನು ಅರಿತ ತಹಸೀಲ್ದಾರ್ ಗುರುಪ್ರಸಾದ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ರವರು ಮತದಾರರನ್ನು ಮನವೊಲಿಸಲು ಮುಂದಾದಾಗ ಮತ ಚಲಾವಣೆಗೆ ಬಂದ ಮತದಾರರನ್ನು ಕಂಡು ಕೆರಳಿದ ಮತ್ತೊಂದು ಗುಂಪಿನವರು ಮಾತಿನ‌ ಚಕಮಕಿ ನಡೆದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮತಗಟ್ಟೆ ಗೆ ನುಗ್ಗಿದ ಪ್ರತಿಭಟನಾಕಾರರು ವಿದ್ಯುನ್ಮಾನ ಯಂತ್ರ ನಾಶ ಪಡಿಸಿ ಮತಗಟ್ಟೆ ದ್ವಂಸ ಮಾಡಿದರು.

ಈ ವೇಳೆ ಮಹಿಳೆಯರೊಬ್ಬರ ತಲೆಗೆ ಪೆಟ್ಟಾಗಿದೆ ಪ್ರಸ್ತುತ ಇಂಡಿಗನತ್ತ ಗ್ರಾಮದ ಮತಗಟ್ಟೆ ಯಲ್ಲಿ ಮತದಾನ ಸ್ಥಗಿತಗೊಂಡಿದೆ.

Chaitra Kulal

Recent Posts

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

11 mins ago

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ʼಅಕ್ಷಯ ಅನ್ನʼ ಕಾರ್ಯಕ್ರಮ

ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌…

23 mins ago

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

28 mins ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

34 mins ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

44 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

54 mins ago