ಚಾಮರಾಜನಗರ

ಯಳಂದೂರು: ಬೇಡಿಕೆಗಳ ಈಡೇರಿಕೆಗೆ ಕಬ್ಬು ಬೆಳೆಗಾರರ ಪ್ರತಿಭಟನೆ

ಯಳಂದೂರು: ಕಬ್ಬು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಪಟ್ಟಣದ ಎಸ್‌ಬಿಐ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಮೂಕಹಳ್ಳಿ ಮಹದೇವಸ್ವಾಮಿ ಮಾತನಾಡಿ, ಕಬ್ಬು ಬೆಳೆಗಾರರಿಗೆ ಟನ್ ಕಬ್ಬಿಗೆ 3500ರೂ. ನಿಗದಿ ಮಾಡಬೇಕು. ಎಫ್‌ಆರ್‌ಪಿ ದರವನ್ನು ಪುನರ್‌ ನಿಗಧಿ ಮಾಡಬೇಕು. ಕಬ್ಬು ಕಟಿಂಗ್ ದರ ಮತ್ತು ಸಾಗಾಣಿಕೆದರ ಟನ್ ಕಬ್ಬಿಗೆ 800 ರೂ. ಯಿಂದ 1000 ರೂ ಆಗಿದ್ದು ಇದನ್ನು ಎಸ್‌ಎಪಿ ಕಾನೂನಿನ ಅನ್ವಯ ನಿಗದಿ ಮಾಡಬೇಕು. ಇದರ ಉಪ ಉತ್ಪನ್ನಗಳಿಂದ ಬರುವ ಲಾಭಾಂಶವನ್ನು ಶೇ. 70-30ರ ಅನುಪಾತದಲ್ಲಿ ರೈತರಿಗೆ ಕೊಡಬೇಕು. ಕಾರ್ಖಾನೆಯಲ್ಲಿ ತೂಕದಲ್ಲಿ ರೈತರಿಗೆ ಆಗುತ್ತಿರುವ ಮೋಸವನ್ನು ತಪ್ಪಿಸಬೇಕು.

ವಿದ್ಯುತ್ ಖಾಸಗೀಕರಣವನ್ನು ತಪ್ಪಿಸಬೇಕು. ರೈತರ ಕೃಷಿ ಭೂಮಿಗಳಿಗೆ ಮೀಟರ್ ಅಳವಡಿಸಿ ಇದಕ್ಕೆ ಆಧಾರ್ ಲಿಂಕ್ ಮಾಡಿಸಿ ಹಣವ ವಸೂಲಿ ಮಾಡಲು ಸರ್ಕಾರ ಹುನ್ನಾರ ನಡೆಸಿದ್ದು ಈ ನಿಯಮ ಸಂಪೂರ್ಣ ರದ್ದಾಗಬೇಕು. ಜಿಲ್ಲೆಯಲ್ಲಿ ಈ ಬಾರಿ ಅತಿಯಾದ ಮಳೆಯಿಂದ ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗಿದ್ದು ಸರ್ಕಾರದಿಂದ ಬೆಳೆ ನಷ್ಟ ಪರಿಹಾರವನ್ನು ನೀಡಬೇಕು. ಬ್ಯಾಂಕ್‌ಗಳ ಕಿರುಕುಳವನ್ನು ತಪ್ಪಿಸಬೇಕು ಎಂದರು.

ರಸ್ತೆ ತಡೆಯಿಂದ ಕೆಲಕಾಲ ವಾಹನಗಳ ಓಡಾಟಕ್ಕೆ ತೊಂದರೆಯಾಗಿತ್ತು. ಕಬ್ಬು ಬೆಳೆಗಾರರ ಸಂಘದ ಷಡಕ್ಷರಿ, ಚಂದ್ರಶೇಖರಮೂರ್ತಿ, ಪಟೇಲ್ ಶಿವಮೂರ್ತಿ, ಮಹೇಶ್, ಬಸವಲಿಂಗಪ್ಪ, ಪ್ರಕಾಶ್, ಮಹದೇವಸ್ವಾಮಿ, ಗುರು, ಪುಟ್ಟಸ್ವಾಮಿ, ರಾಜು ಸೇರಿದಂತೆ ಅನೇಕರು ಇದ್ದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago