News Karnataka Kannada
Thursday, May 02 2024
ಚಾಮರಾಜನಗರ

ಯಳಂದೂರು: ಗುಂಬಳ್ಳಿ ಸರ್ಕಾರಿ ಶಾಲೆಯಲ್ಲಿ ಕಳ್ಳತನ

Yelandur: Theft at Gumballi government school
Photo Credit : By Author

ಯಳಂದೂರು: ತಾಲೂಕಿನ ಗುಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಕಳ್ಳತನ ನಡೆದಿದ್ದು ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳ ಕಳ್ಳತನವಾಗಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ. 8 ರಂದು ಈ ಕಳ್ಳತನ ನಡೆದಿದೆ. ಶಾಲೆಯಲ್ಲಿದ್ದ 2 ಕಂಪ್ಯೂಟರ್, 2 ಪ್ರಾಜೆಕ್ಟರ್, ಸ್ಪೀಕರ್, ಯುಪಿಎಸ್ ಬ್ಯಾಟರಿಗಳನ್ನು ಸೇರಿದಂತೆ ವಿವಿಧ ವಸ್ತುಗಳನ್ನು ಕಳ್ಳರು ಬಾಗಿಲಿನ ಬೀಗಗಳನ್ನು ಒಡೆದು ಕಳ್ಳತನ ಮಾಡಿದ್ದಾರೆ.

ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕಿ ಪುಟ್ಟನಂಜಮ್ಮ ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಶ್ವಾನದಳದ ಸಿಬ್ಬಂಧಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ವಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು