ಗುಂಡ್ಲುಪೇಟೆ: ರಂಜಿತ್ ಎಂಬಾತ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಅವಾಚ್ಯ ಶಬ್ದದಿಂದ ನಿಂದಿಸಿದ ಹಿನ್ನೆಲೆ ಆತನನ್ನು ಬಂಧಿಸಲಾಗಿದೆ. ಈ ಘಟನೆ ಗುಂಡ್ಲುಪೇಟೆ ಮೈದಾನದಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದ ವೇಳೆ ನಡೆದಿದೆ.
ಬಿಜೆಪಿ ರಾಮಮಂದಿರ ನಿರ್ಮಾಣವನ್ನು ರಾಜಕೀಯಕ್ಕೆ ಬಳಸಿಕೊಳ್ತಿದ್ದಾರೆ. ರಾಮಮಂದಿರ ಕಟ್ಟಿದಾಕ್ಷಣ ರಾಮರಾಜ್ಯ ಸೃಷ್ಟಿಯಾಗುವುದಿಲ್ಲ. ಬಡವರನ್ನು, ದೀನದಲಿತರನ್ನು, ಅಬಲೆ ಮಹಿಳೆಯರಿಗೆ ನ್ಯಾಯ ಸಿಕ್ಕಾಗ ಮಾತ್ರ ರಾಮರಾಜ್ಯವಾಗುತ್ತೆ ಎಂದು ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು. ಈ ವೇಳೆ ರಂಜಿತ್ ಅವಾಚ್ಯ ಶಬ್ದದಿಂದ ನಿಂದಿಸಿದ್ದಾನೆ ಎನ್ನಲಾಗಿದೆ.
ಬಳಿಕ ರಂಜಿತ್ನನ್ನ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.